BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ದೇಶ

DK Shivakumar ಒಕ್ಕೂಟ ವ್ಯವಸ್ಥೆಯಲ್ಲಿ ಬೇರೆ ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಸಲ್ಲದು,ತಮಿಳುನಾಡು ಪನ್ನೀರ್‌ಸೆಲ್ವಂಗೆ ಸಿಎಂ ಡಿ ಕೆ ಶಿವಕುಮಾರ್ ತಿರುಗೇಟು


ಬೆಂಗಳೂರು, ಆಗಸ್ಟ್ 18 :  “ಇದು ಒಕ್ಕೂಟ ವ್ಯವಸ್ಥೆ. ಯಾವುದೇ ರಾಜ್ಯವೂ ಇನ್ನೊಂದು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು. ಪನ್ನೀರ್‌ಸೆಲ್ವಂ ಆಗಲಿ ಅಥವಾ ಯಾರೇ ಆಗಲಿ, ಅವರಿಗೆ ಕನಿಷ್ಠ ಸಂಸ್ಕೃತಿ ಇರಬೇಕು” ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀಕ್ಷ್ಣವಾಗಿ ತಿರುಗೇಟು ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹನೂರು ಶೂಟೌಟ್ ಪ್ರಕರಣದ ಕುರಿತು ತಮಿಳುನಾಡು ಮಾಜಿ ಮುಖ್ಯಮಂತ್ರಿ ಒ. ಪನ್ನೀರ್‌ಸೆಲ್ವಂ ಸಿಬಿಐ ತನಿಖೆಗೆ ಆಗ್ರಹಿಸಿರುವ ಹೇಳಿಕೆಗೆ ಈ ಪ್ರತಿಕ್ರಿಯೆ ನೀಡಿದ್ದಾರೆ “ತಮಿಳುನಾಡಿನ ಕಾನೂನು ಮತ್ತು ಸುವ್ಯವಸ್ಥೆಯ ಸಮಸ್ಯೆಯಲ್ಲಿ ನಾನು ಯಾವುದೇ ರೀತಿಯಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ. ಪ್ರತಿಯೊಂದು ರಾಜ್ಯಕ್ಕೂ ತನ್ನದೇ ಆದ ಸಮಸ್ಯೆಗಳಿರುತ್ತವೆ, ಅದನ್ನು ಅವರೂ ತಿಳಿದುಕೊಳ್ಳಬೇಕು. ನಮ್ಮ ರಾಜ್ಯವನ್ನು ಹೇಗೆ ರಕ್ಷಿಸಿಕೊಳ್ಳಬೇಕು ಎಂಬುದು ನಮಗೆ ಚೆನ್ನಾಗಿ ತಿಳಿದಿದೆ. ಅವರು ತಮ್ಮ ಕೆಲಸವನ್ನು ನೋಡಿಕೊಳ್ಳಲಿ, ನಾವು ನಮ್ಮ ಕೆಲಸ ಮಾಡುತ್ತೇವೆ. ನಮ್ಮ ರಾಜ್ಯಕ್ಕಿರುವ ಪವಿತ್ರತೆಯನ್ನು ನಾವು ಕಾಪಾಡಿಕೊಳ್ಳುತ್ತೇವೆ ಮತ್ತು ರಕ್ಷಿಸುತ್ತೇವೆ” ಎಂದು ಸ್ಪಷ್ಟಪಡಿಸಿದರು.

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!