BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ರಾಜ್ಯ

DKShivakumar ಗುಟ್ಕಾ, ಪಾನ್‌ ಮಸಾಲ ಮೇಲಿನ ಒಂದು ವರ್ಷದ ನಿಷೇಧ ಜಾರಿಯಾದ ಎರಡೇ ದಿನದಲ್ಲಿ ಹಿಂಪಡೆದ ಸರ್ಕಾರ


ಬೆಂಗಳೂರು,ಆಗಸ್ಟ್ 14: ತಂಬಾಕು ಅಥವಾ ನಿಕೋಟಿನ್ ಒಳಗೊಂಡಿರುವ ಗುಟ್ಕಾ ಹಾಗೂ ಪಾನ್‌ ಮಸಾಲಾ ಉತ್ಪನ್ನಗಳ ಮೇಲೆ ಕರ್ನಾಟಕ ಸರ್ಕಾರ ಹೇರಿದ್ದ ಒಂದು ವರ್ಷದ ನಿಷೇಧವನ್ನು ಜಾರಿ ತಂದ ಎರಡೇ ದಿನದಲ್ಲಿ ಸರ್ಕಾರ ವಾಪಸ್ ಪಡೆದಿದೆ. 

ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಈ ನಿಷೇಧ ಆದೇಶವನ್ನು ಹಿಂಪಡೆಯುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ತಮ್ಮ ಗಮನಕ್ಕೆ ತಾರದೆ ಈ ಆದೇಶ ಹೊರಡಿಸಿರುವುದಕ್ಕೆ ಸಿಎಂ ಡಿಕೆ ಶಿವಕುಮಾರ್ ಅಸಮಾಧಾನಗೊಂಡಿದ್ದರು. ಈ ನಿಷೇಧದಿಂದ ಹಲವು ರೈತರಿಗೆ ನಷ್ಟ ಉಂಟಾಗಬಹುದು ಎಂಬ ಕಾರಣ ನೀಡಿ, ಆದೇಶವನ್ನು ತಕ್ಷಣವೇ ಹಿಂಪಡೆಯುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.ಇದಕ್ಕೂ ಮುನ್ನ ಗುರುವಾರ ಬಿಜೆಪಿ ಮತ್ತು ಕಾಂಗ್ರೆಸ್ ಶಾಸಕರ ನಿಯೋಗವೊಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ನಿಷೇಧ ಆದೇಶವನ್ನು ಹಿಂಪಡೆಯುವಂತೆ ಮನವಿ ಮಾಡಿತ್ತು. ಬಿಜೆಪಿ ಶಾಸಕ ಆರಗ ಜ್ಞಾನೇಂದ್ರ ಮತ್ತು ಕಾಂಗ್ರೆಸ್ ಶಾಸಕ ಡಿ.ಜಿ. ಶಾಂತನಗೌಡ ಅವರು ನಿಯೋಗದ ನೇತೃತ್ವ ವಹಿಸಿದ್ದರು. ಸರ್ಕಾರದ ಆದೇಶದಿಂದ ರೈತರಲ್ಲಿ ಆತಂಕ ಉಂಟಾಗಿದ್ದು, ಮಾರುಕಟ್ಟೆಯ ಮೇಲೂ ಪರಿಣಾಮ ಬೀರಬಹುದು ಎಂದು ನಿಯೋಗವು ಮುಖ್ಯಮಂತ್ರಿಗೆ ತಿಳಿಸಿತ್ತು. ಈ ನಿರ್ಧಾರದಿಂದ ಉಂಟಾಗಬಹುದಾದ ನಷ್ಟದಿಂದ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸರ್ಕಾರವನ್ನು ಒತ್ತಾಯಿಸಲಾಗಿತ್ತು. ಇದೀಗ ಸರ್ಕಾರ ನಿಯೋಗದ ಮನವಿಗೆ ಸ್ಪಂದಿಸಿ ಗುಟ್ಕಾ, ಪಾನ್‌ಮಸಲಾ ನಿಷೇಧ ವಾಪಾಸ್ ಪಡೆದುಕೊಂಡಿದೆ. 


📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!