BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ದೇಶ

HD Kumaraswamy Contravasy ವಂದೇ ಮಾತರಂ ವಿವಾದ: ಸೋನಿಯಾ ಗಾಂಧಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ವಿವಾದಾತ್ಮಕ ಹೇಳಿಕೆ


ಬೆಂಗಳೂರು, ಆಗಸ್ಟ್ 17 :  ರಾಷ್ಟ್ರ ಗೀತೆ 'ವಂದೇ ಮಾತರಂ' ಕುರಿತಾದ ವಿವಾದ ರಾಜ್ಯ ರಾಜಕಾರಣದಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಅವರ ಮೂಲದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದು, ಈ ಬಗ್ಗೆ ಭಾರಿ ಚರ್ಚೆ ಹುಟ್ಟುಹಾಕಿದೆ.

ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಚ್.ಡಿ. ಕುಮಾರಸ್ವಾಮಿ, ಬಂಕಿಮ್ ಚಂದ್ರ ಚಟ್ಟೋಪಾಧ್ಯಾಯ ಅವರು ಬರೆದಿರುವ 'ವಂದೇ ಮಾತರಂ' ಗೀತೆಯನ್ನು ಪ್ರತಿಯೊಬ್ಬರೂ ಗೌರವಿಸಬೇಕು ಎಂದು ಹೇಳಿದರು. ಸ್ವಾತಂತ್ರ್ಯ ಚಳವಳಿಯಲ್ಲಿ ಈ ಗೀತೆಗೆ ಐತಿಹಾಸಿಕ ಹಿನ್ನೆಲೆಯಿದೆ ಎಂದು ತಿಳಿಸಿದ ಅವರು, ಕಾಂಗ್ರೆಸ್ ಪಕ್ಷವು ವಂದೇ ಮಾತರಂ ಅನ್ನು ವಿರೋಧಿಸುತ್ತಿರುವುದೇಕೆ ಎಂದು ತೀವ್ರವಾಗಿ ಪ್ರಶ್ನಿಸಿದರು.ಮಹಾತ್ಮ ಗಾಂಧೀಜಿ ಹಾಗೂ ರವೀಂದ್ರನಾಥ ಟ್ಯಾಗೋರ್ ಅವರ ಉದಾಹರಣೆ ನೀಡಿದ ಕುಮಾರಸ್ವಾಮಿ, ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲೂ ಈ ಗೀತೆಯನ್ನು ಹಾಡಲಾಗಿತ್ತು ಎಂದು ಸ್ಮರಿಸಿದರು. ಕಾಂಗ್ರೆಸ್ ಪಕ್ಷ ಈ ವಿಚಾರದಲ್ಲಿ ಸಂಕುಚಿತ ಮನೋಭಾವ ತೋರಬಾರದು ಎಂದು ಎಚ್ಚರಿಸಿದರು. ಇದೇ ವೇಳೆ, ಸೋನಿಯಾ ಗಾಂಧಿ ವಿರುದ್ಧ ವಾಗ್ದಾಳಿ ಮುಂದುವರಿಸಿದ ಅವರು, "ಸೋನಿಯಾ ಗಾಂಧಿ ನಮ್ಮ ದೇಶದವರೇ? ಮದುವೆಯಾಗಿ ಭಾರತಕ್ಕೆ ಬಂದವರು. ಅವರ ರಕ್ತದಲ್ಲಿ ಹರಿಯುತ್ತಿರುವುದು ಭಾರತೀಯರಕ್ತವೇ ಅಥವಾ ಇಟಲಿ ರಕ್ತವೇ?" ಎಂದು ವಿವಾದಾತ್ಮಕ ಪ್ರಶ್ನೆ ಎಸೆದರು. ಕಾಂಗ್ರೆಸ್ ಪಕ್ಷವು ಸ್ವಾತಂತ್ರ್ಯ ಹೋರಾಟಕ್ಕೆ ಪ್ರಮುಖ ಪಾತ್ರ ವಹಿಸಿದ ರಾಷ್ಟ್ರೀಯ ಗೀತೆಗೆ ಅಪಮಾನ ಮಾಡುತ್ತಿದೆ ಎಂದು ಅವರು ಆಪಾದಿಸಿದರು. ಕುಮಾರಸ್ವಾಮಿ ಅವರ ಈ ಹೇಳಿಕೆ ಇದೀಗ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

https://youtu.be/z__luRlf8A8

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!