BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ದಕ್ಷಿಣ ಕನ್ನಡ

Kadaba Acid attack conviction ಕಡಬದಲ್ಲಿ ಮಹಿಳೆ ಮೇಲೆ ಮಾರಣಾಂತಿಕ ಆ್ಯಸಿಡ್ ದಾಳಿ ನಡೆಸಿದ್ದ ಪ್ರಕರಣ, ಆರೋಪಿ ಜಯಾನಂದ 10 ವರ್ಷಗಳ ಕಠಿಣ ಶಿಕ್ಷೆಯೊಂದಿಗೆ ಭಾರಿ ದಂಡ..!


ಪುತ್ತೂರು, ಆಗಸ್ಟ್ 26 : ಮಹಿಳೆಯ ಮೇಲೆ ಮಾರಣಾಂತಿಕ ಆ್ಯಸಿಡ್ ದಾಳಿ ನಡೆಸಿದ್ದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು, ಅಪರಾಧಿಗೆ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ಭಾರಿ ಮೊತ್ತದ ದಂಡ ವಿಧಿಸಿ ಮಹತ್ವದ ಆದೇಶ ಹೊರಡಿಸಿದೆ. ಕಡಬದ ಕೊಡಿಂಬಾಳ ನಿವಾಸಿ ಜಯಾನಂದ ಕೆ. (60) ಶಿಕ್ಷೆಗೆ ಒಳಗಾದ ಅಪರಾಧಿ. 2020ರಲ್ಲಿ ಕಡಬ ಪೊಲೀಸ್ ಠಾಣೆಯಲ್ಲಿ ಈ ಆರೋಪಿಯ ವಿರುದ್ಧ ಐಪಿಸಿ ಸೆಕ್ಷನ್ 354A, 509, 504, 506, 448, 307 ಹಾಗೂ 326A ಅಡಿಯಲ್ಲಿ ವಿವಿಧ ಗಂಭೀರ ಪ್ರಕರಣಗಳು ದಾಖಲಾಗಿದ್ದವು. ಅಂದು ತನಿಖೆ ನಡೆಸಿದ್ದ ಪುತ್ತೂರು ಮಹಿಳಾ ಠಾಣೆಯ ನಿರೀಕ್ಷಕಿ ಕುಸುಮಧರ ಅವರು ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಸದಾನಂದ ನಾಗಪ್ಪ ನಾಯ್ಕ್ ಅವರು, ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿ ಆರೋಪ ಸಾಬೀತಾಗಿದೆ ಎಂದು ತೀರ್ಮಾನಿಸಿದ್ದಾರೆ. ಐಪಿಸಿ ಕಲಂ 326A ಅಡಿ ಅಪರಾಧಿಗೆ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು ರೂ. 3,00,000 ದಂಡ ವಿಧಿಸಲಾಗಿದೆ. ದಂಡ ಕಟ್ಟಲು ವಿಫಲವಾದರೆ ಹೆಚ್ಚುವರಿಯಾಗಿ 2 ವರ್ಷಗಳ ಸರಳ ಕಾರಾಗೃಹ ಶಿಕ್ಷೆ ಅನುಭವಿಸಬೇಕು. ಹಾಗೆಯೇ, ಕಲಂ 504ರ ಅಡಿ 1 ವರ್ಷದ ಕಾರಾಗೃಹ ಶಿಕ್ಷೆ ಹಾಗೂ ರೂ. 5,000 ದಂಡ ವಿಧಿಸಿ ನ್ಯಾಯಾಲಯ ಆದೇಶಿಸಿದೆ.

ಈ ಪ್ರಕರಣದಲ್ಲಿ ಸರ್ಕಾರದ ಪರವಾಗಿ ಅಭಿಯೋಜಕರಾದ ಕೃಷ್ಣವೇಣಿ, ಹರಿಶ್ಚಂದ್ರ ಉದ್ಯಾವರ್, ಪ್ರಕಾಶ್ ಚಂದ್ರ ಶೆಟ್ಟಿ ಹಾಗೂ ಜಯಂತಿ ಕೆ. ಅವರು ವಾದ ಮಂಡಿಸಿದ್ದರು. ಗಂಭೀರ ಸ್ವರೂಪದ ಅಪರಾಧ ಪ್ರಕರಣಗಳಲ್ಲಿ ತ್ವರಿತ ತನಿಖೆ ಮತ್ತು ಸಾಕ್ಷ್ಯಾಧಾರಗಳ ಮಹತ್ವವನ್ನು ಈ ತೀರ್ಪು ಮತ್ತೊಮ್ಮೆ ಎತ್ತಿಹಿಡಿದಿದೆ.


https://www.facebook.com/share/v/1EhJrEcxjR/

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!