BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ

Pond Incident in Kannur ಕಣ್ಣೂರಿನಲ್ಲಿ ಈಜುಕೊಳದಲ್ಲಿ ಬಿದ್ದು ಬಾಲಕ ಮೃತ್ಯು..!


ಕಣ್ಣೂರು, ಆಗಸ್ಟ್ 06 : ಕೇರಳ ಕಣ್ಣೂರಿನಲ್ಲಿ ಈಜುಕೊಳಕ್ಕೆ ಬಿದ್ದು ಬಾಲಕನೋರ್ವ ಮೃತಪಟ್ಟಿದ್ದಾನೆ.  ಜಿಲ್ಲೆಯ   ಪಟ್ಟುವಂ ಕಡವು ಸರ್ಕಾರಿ ಎಲ್‌ಪಿ ಶಾಲೆಯಲ್ಲಿ 3ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ  ಅಮನ್ ಮೃತ ಬಾಲಕನಾಗಿದ್ದಾನೆ. ಸಂಜೆ ಸುಮಾರು 7 ಗಂಟೆ ವೇಳೆಗೆ ಈಜುಕೊಳದ ಬಳಿ ಹೋಗಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಸ್ನಾನ ಮಾಡಿದ ಬಳಿಕ ಕಾಲು ತೊಳೆಯುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಬಾಲಕ ಅಮನ್ ನೀರಿಗೆ ಬಿದ್ದಿದ್ದಾನೆ. ಕೆಲ ಸಮಯದ ಬಳಿಕ ಬಾಲಕ ಕಾಣೆಯಾಗಿರುವುದು ಗಮನಕ್ಕೆ ಬಂದಿದ್ದು, ಕುಟುಂಬಸ್ಥರು ಹಾಗೂ ಸ್ಥಳೀಯರು ಹುಡುಕಾಟ ನಡೆಸಿದ್ದಾರೆ. ಈ ವೇಳೆ ಬಾಲಕ ನೀರಿನಲ್ಲಿ ಮುಳುಗಿರುವುದು ಪತ್ತೆಯಾಗಿದೆ.

ಕೂಡಲೇ ಸ್ಥಳೀಯರು ಬಾಲಕನನ್ನು ಹೊರತೆಗೆದು ಆಸ್ಪತ್ರೆಗೆ ಕರೆದೊಯ್ದರೂ, ಅಷ್ಟರಲ್ಲಾಗಲೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಬಾಲಕನ ಅಕಾಲಿಕ ಸಾವಿನಿಂದ ಕುಟುಂಬಸ್ಥರು ಹಾಗೂ ಸ್ಥಳೀಯರಲ್ಲಿ ದುಃಖ ಮಡುಗಟ್ಟಿದೆ. 

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!