BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ಉಡುಪಿ

Karnataka Rain Alert ಮುಂದಿನ 24 ಗಂಟೆ ಕರಾವಳಿ ಜಿಲ್ಲೆಗಳಲ್ಲಿ ಬಿರುಗಾಳಿಯೊಂದಿಗೆ ಭಾರಿ ಮಳೆ; ಹವಾಮಾನ ಇಲಾಖೆ ಎಚ್ಚರಿಕೆ


ಬೆಂಗಳೂರು,ಆಗಸ್ಟ್ 04: ​ಮುಂದಿನ 24 ಗಂಟೆ ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಬಿರುಗಾಳಿಯೊಂದಿಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸಲಿದ್ದು, ಜೊತೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಎಚ್ಚರಿಸಿದೆ.

​ಹಾಸನ ಜಿಲ್ಲೆಯ ಒಂದೆರಡು ಸ್ಥಳಗಳಲ್ಲಿ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ. ​ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರು ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದ ಬಿರುಗಾಳಿ ಕಂಡುಬರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇದರ ಜೊತೆಗೆ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಹಲವು ಭಾಗಗಳಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದ ಗಾಳಿಯೊಂದಿಗೆ ಹಗುರ ಮಳೆಯಾಗಲಿದೆ ​ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಗಂಟೆಗೆ 40ರಿಂದ 50 ಕಿಲೋಮೀಟರ್ ವೇಗದ ಬಿರುಗಾಳಿ ಬೀಸಲಿದ್ದು, ಹಗುರದಿಂದ ಸಾಧಾರಣ ಮಳೆಯಾಗಲಿದೆ. ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಗಂಟೆಗೆ 40ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದ್ದು, ಹಗುರ ಮಳೆಯಾಗುವ ಮುನ್ಸೂಚನೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

https://youtu.be/qeJQA8m3eMY


📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!