BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ರಾಜ್ಯ

Karwar heart attack case converted to murder investigationrder case ಜೋಯಿಡದ ವಿವಾಹಿತೆ ಮಂಗಳಾನಾಯ್ಕ ಹೃದಯಾಘಾತ ಪ್ರಕರಣ ಬದಲಾಯ್ತು ಕೊಲೆ ಪ್ರಕರಣ..!


ಕಾರವಾರ, ಆಗಸ್ಟ್ 28 : ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ನಂದಿಗದ್ದೆಯ  ಮಂಗಳಾ ನಾಯ್ಕ ವಿವಾಹಿತೆಯ ಅನುಮಾನಾಸ್ಪದ ಸಾವು ಇದೀಗ ಕೊಲೆಯಾಗಿ ಪರಿವರ್ತನೆಯಾಗಿದೆ. ಈ  ಸಂಬಂಧ ಆಕೆಯ ಗಂಡ ಗಣಪತಿ ಮಂಜುನಾಥ ನಾಯ್ಕ ಅವರನ್ನು ಪೊಲೀಸರು ಬಂಧಿಸಿದ್ದಾರೆ. 

 ಕುಟುಂಬದಲ್ಲಿ ಉಂಟಾದ ಜಗಳವೇ  ಕೊಲೆಗೆ ಕಾರಣವೆಂದು ಹೇಳಲಾಗಿದೆ. ಪತಿ ಗಣಪತಿ ಅವರೇ  ಪತ್ನಿ ಮಂಗಳಾ ನಾಯ್ಕರನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಬಳಿಕ ಇದನ್ನು ಹೃದಯಾಘಾತವೆಂದು ಬಿಂಬಿಸಲು ಯತ್ನಸಿದ್ದಾನೆ. ಮನೆಯಲ್ಲಿ ಮಲಗಿದ್ದ ಮಂಗಲಾಳ ಕತ್ತು ಹಿಸುಕಿ ಆಕೆಯ ಪತಿ ಗಣಪತಿ ಮಂಜುನಾಥ ನಾಯ್ಕ ಕೊಲೆ ಮಾಡಿದ್ದಾನೆ ಎಂದು ಮೃತಳ ಸಹೋದರಿ ಲಲಿತಾ ಸಚಿನ್ ಗುಂಜಿಕರ್ ಮಂಕಿ ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದರು. ಈ ಬಗ್ಗೆ ದೂರು ದಾಖಲು ಮಾಡಿದ್ದ ಪೊಲೀಸರು ಮಂಗಳಾ ನಾಯ್ಕರ ಮರಣೋತ್ತರ ಪರೀಕ್ಷೆ ನಡೆಸಿದ್ದರು. ಘಟನೆಗೆ ಸಂಬಂಧಿಸಿದಂತೆ ಮಂಕಿ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 57/2026ರಡಿ ಭಾರತೀಯ ನ್ಯಾಯ ಸಂಹಿತೆ (BNS) 103(1) ಅಡಿಯಲ್ಲಿ ಕೊಲೆ ಪ್ರಕರಣ ದಾಖಲಾಗಿತ್ತು.  ದೂರು ದಾಖಲಾಗುತ್ತಿದ್ದಂತೆ ಕಾರ್ಯಪ್ರವೃತ್ತರಾದ ಪೊಲೀಸರು ಆರೋಪಿಯ ಪತ್ತೆಗೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ 24 ಗಂಟೆಗಳೊಳಗೆ ಗಣಪತಿ ಎಂ. ನಾಯ್ಕ ನನ್ನು ಬಂಧಿಸಿದ್ದಾರೆ. ಮಗಳ ಪೋಷಕರಾದ ಹರಿಶ್ಚಂದ್ರ ದೇಸಾಯಿ ಮಗಳ ಸಾವಿಗೆ ಕಾರಣನಾದ ಆರೋಪಿಗೆ ಕಾನೂನಿನಡಿ ಕಠಿಣ ಶಿಕ್ಷೆಯಾಗಬೇಕು ಎಂದಿದ್ದಾರೆ. ಪ್ರಕರಣದ ತನಿಖೆ ಮುಂದುವರಿದಿದ್ದು, ಪೊಲೀಸರು ಕ್ರಮ ಕೈಗೊಂಡಿದ್ದಾರೆ.




📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!