BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ದೇಶ

Kasaragod: Lorry overturns and crashes onto a house out of control - Driver dies ಕಾಸರಗೋಡು: ನಿಯಂತ್ರಣ ತಪ್ಪಿ ಮನೆಯ ಮೇಲೆ ಉರುಳಿಬಿದ್ದ ಲಾರಿ ಚಾಲಕ ಮೃತ್ಯು..!


ಕಾಸರಗೋಡು, ಆಗಸ್ಟ್ 29: ಲಾರಿಯೊಂದು ನಿಯಂತ್ರಣ ತಪ್ಪಿ ಮನೆಯ ಮೇಲೆ ಉರುಳಿಬಿದ್ದ ಪರಿಣಾಮ ಚಾಲಕ ಮೃತಪಟ್ಟ ದಾರುಣ ಘಟನೆ ಕಾಸರಗೋಡು ಸಮೀಪ ಮಡಿಕೈ ಕಂಞಿರಪೊಯಿಲ್‌ನಲ್ಲಿ ಶನಿವಾರ ಬೆಳಗ್ಗೆ ಸಂಭವಿಸಿದೆ.

ಚಾಯ್ಯೋಂ ನಿವಾಸಿ ಸಾದಿಕ್ (೪೦) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಕಂಞಿರಪೊಯಿಲ್ ಕುಳಂಗಾಟ್ ಎಂಬಲ್ಲಿ ಕೆಂಪು ಕಲ್ಲುಗಳನ್ನು ಹೇರಿಕೊಂಡು ಬಂದಿದ್ದ ಲಾರಿಯು, ಕಲ್ಲನ್ನು ಅನ್-ಲೋಡ್ ಮಾಡಿದ ಬಳಿಕ ಮುಂದಕ್ಕೆ ಚಲಿಸುವಾಗ ಚಾಲಕನ ನಿಯಂತ್ರಣ ತಪ್ಪಿದೆ. ಪರಿಣಾಮವಾಗಿ ಸಮೀಪದಲ್ಲಿದ್ದ ಪಿ. ಗೋಪಾಲನ್ ಎಂಬವರ ಮನೆಯ ಮೇಲೆ ಲಾರಿ ಉರುಳಿಬಿದ್ದಿದೆ.

ಅಪಘಾತದ ತೀವ್ರತೆಗೆ ಮನೆಯ ಅಡುಗೆ ಕೋಣೆ ಸಂಪೂರ್ಣವಾಗಿ ಧ್ವಂಸಗೊಂಡಿದೆ. ಗಂಭೀರವಾಗಿ ಗಾಯಗೊಂಡಿದ್ದ ಲಾರಿ ಚಾಲಕ ಸಾದಿಕ್ ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!