ಕಾಸರಗೋಡು,ಆಗಸ್ಟ್ 16 : ಮೀಪ್ಪುಗಿರಿ ಮೂಲದ ತಂದೆ ಹಾಗೂ ಅವರ ಪುತ್ರಿ ಬಾಡಿಗೆ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮೃತರನ್ನು ಗಣೇಶನ್ (48) ಮತ್ತು ಅವರ ಪುತ್ರಿ ವೈಷ್ಣವಿ (16) ಎಂದು ಗುರುತಿಸಲಾಗಿದೆ.
ಕಾಸರಗೋಡು ಕೊಲಿಯಾಡುಕ್ಕಂನ ಶಿವಪುರಂನಲ್ಲಿರುವ ಬಾಡಿಗೆ ಮನೆಯಲ್ಲಿ ಈ ಘಟನೆ ನಡೆದಿದೆ. ಆಗಸ್ಟ್ 15ರಂದು ರಾತ್ರಿ ಈ ದುರ್ಘಟನೆ ಸಂಭವಿಸಿರುವ ಶಂಕೆ ವ್ಯಕ್ತವಾಗಿದ್ದು, ತಂದೆ-ಮಗಳು ಮಲಗುವ ಕೋಣೆಯ ಸೀಲಿಂಗ್ ಕೊಕ್ಕೆಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಶಾಲೆ ಹಾಗೂ ಪೊಲೀಸ್ ಮಾಹಿತಿ: ವೈಷ್ಣವಿ ಅವರು ಪರವನಡುಕ್ಕಂ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯ ಪ್ಲಸ್‌ಟು ವಿದ್ಯಾರ್ಥಿನಿಯಾಗಿದ್ದರು. ವಿಷಯ ತಿಳಿದ ತಕ್ಷಣ ಮೇಲ್ಪರಂಬ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಸಂಬಂಧ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ (BNSS) ಸೆಕ್ಷನ್ 194ರ ಅಡಿಯಲ್ಲಿ ಮೇಲ್ಪರಂಬ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಈ ಸಂಬಂಧ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ (BNSS) ಸೆಕ್ಷನ್ 194ರ ಅಡಿಯಲ್ಲಿ ಮೇಲ್ಪರಂಬ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಸಾವಿನ ಪ್ರಕರಣ ದಾಖಲಾಗಿದ್ದು, ಅಪರಾಧ ಸಂಖ್ಯೆ 0381/2026 ಎಂದು ನಮೂದಿಸಲಾಗಿದೆ. ಭಾನುವಾರ ಮುಂಜಾನೆ ಸುಮಾರು 3.11ಕ್ಕೆ ಪ್ರಕರಣ ದಾಖಲಾಗಿದ್ದು, ಎಸ್‌ಐ ಅಖಿಲ್ ಟಿ ಅವರನ್ನು ತನಿಖಾಧಿಕಾರಿಯಾಗಿ ನೇಮಿಸಲಾಗಿದೆ. ತಂದೆ-ಮಗಳ ಸಾವಿಗೆ ಕಾರಣವೇನು ಎಂಬುದು ಸದ್ಯಕ್ಕೆ ಸ್ಪಷ್ಟವಾಗಿಲ್ಲ. ಘಟನೆ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.