BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ದಕ್ಷಿಣ ಕನ್ನಡ

Kasaragod| ಕಾಸರಗೋಡಿನಲ್ಲಿ ಶಾಲಾ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ: ಪುತ್ತೂರಿನ ಯುವಕ ಶಮ್ಮಾಸ್ ಅಬ್ದುಲ್ಲಾ ದುರ್ಮರಣ..!


ಕಾಸರಗೋಡು,ಆಗಸ್ಟ್ 21 : ಶಾಲಾ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟ ಘಟನೆ ಕಾಸರಗೋಡಿನ ಬೋವಿಕ್ಕಾನ ಸಮೀಪದ ಪೊವ್ವಲ್ ಮಾಸ್ತಿಕುಂಡು ಎಂಬಲ್ಲಿಗುರುವಾರ ಸಂಭವಿಸಿದೆ.

ದಕ್ಷಿಣ ಕನ್ನಡದ ಪುತ್ತೂರು ಗಾಳಿಮುಖ ನೆಟ್ಟಣಿಗೆಯ ಹೊಸಹಿತ್ತಿಲು ನಿವಾಸಿ ಎಸ್. ಶಮ್ಮಾಸ್ ಅಬ್ದುಲ್ಲಾ (25) ಮೃತ ದುರ್ದೈವಿಯಾಗಿದ್ದಾನೆ.

ಶಮ್ಮಾಸ್ ಅವರು ಚೆರ್ಕಳ ಕಡೆಯಿಂದ ಗಾಳಿಮುಖದತ್ತ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ, ಮಾಸ್ತಿಕುಂಡು ಎಂಬಲ್ಲಿ ಎದುರಿನಿಂದ ಬರುತ್ತಿದ್ದ ಖಾಸಗಿ ಶಾಲಾ ಬಸ್ ಬೈಕ್‌ಗೆ ಢಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಗಂಭೀರ ಗಾಯಗೊಂಡಿದ್ದ ಶಮ್ಮಾಸ್ ಅವರನ್ನು ತಕ್ಷಣವೇ ಕಾಸರಗೋಡಿನ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಿಸದೆ ಅವರು ಸಾವನ್ನಪ್ಪಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಆದೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!