BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ದೇಶ

Kasaragod ಕೆರೆಗೆ ಸ್ನಾನಕ್ಕಿಳಿದ ಪಿಯುಸಿ ವಿದ್ಯಾರ್ಥಿ ನೀರಲ್ಲಿ ಮುಳುಗಿ ಮೃತ್ಯು..!


ಕಾಸರಗೋಡು, ಆಗಸ್ಟ್ 18: ಕೆರೆಗೆ ಸ್ನಾನಕ್ಕಿಳಿದ  ಕಾಲೇಜು ವಿದ್ಯಾರ್ಥಿಯೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕೇರಳ ಕಾಸರಗೋಡಿನ ಉದಯಗಿರಿಯಲ್ಲಿ ನಡೆದಿದೆ. ಇಲ್ಲಿನ ವಿದ್ಯಾನಗರ ಚಾಲ ಮೂಲದ, ಪ್ರಸಕ್ತ ಉದಯಗಿರಿಯಲ್ಲಿ ವಾಸಿಸುತ್ತಿರುವ ಅಬೂಬಕರ್ ಎಂಬವರ ಪುತ್ರ ಮುಹಮ್ಮದ್ ಶಾಹಿಲ್ (15) ಮೃತಪಟ್ಟ ಬಾಲಕನಾಗಿದ್ದಾನೆ. ಶಾಹಿಲ್  ನಾಯನ್ಮಾರ್ ಮೂಲ ತನ್ಬೀಹುಲ್ ಇಸ್ಲಾಂ ಹೈಯರ್ ಸೆಕೆಂಡರಿ ಶಾಲೆಯ  ಪಿಯುಸಿ ಮೊದಲ ವರ್ಷದ ವಿದ್ಯಾರ್ಥಿಯಾಗಿದ್ದ. ಶಾಲೆಗೆ ಹೊರಡುವ ಮುನ್ನ ಶಾಹಿಲ್ ಮನೆ ಸಮೀಪವಿರುವ ಕೆರೆಗೆ ಸ್ನಾನ ಮಾಡಲು ತೆರಳಿದ್ದನು ಎನ್ನಲಾಗಿದೆ. ಸ್ನಾನ ಮಾಡುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಆಳವಾದ ನೀರಿನಲ್ಲಿ ಮುಳುಗಿದ್ದಾನೆ ಎನ್ನಲಾಗಿದೆ. ಶಾಹಿಲ್ ನಾಪತ್ತೆಯಾದುದರಿಂದ ಕುಟುಂಬಸ್ಥರು ಮತ್ತು ಸ್ಥಳೀಯರು ಹುಡುಕಾಟ ನಡೆಸಿದಾಗ ಕೆರೆಯಲ್ಲಿ ಮುಳುಗಿರುವುದು ಬೆಳಕಿಗೆ ಬಂದಿದೆ. ತಕ್ಷಣವೇ ಆತನನ್ನು ನೀರಿನಿಂದ ಹೊರತೆಗೆದು ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ, ಅಷ್ಟರಲ್ಲೇ ಶಾಹಿಲ್ ಕೊನೆಯುಸಿರೆಳೆದಿದ್ದಾಗಿ ವೈದ್ಯರು ದೃಢಪಡಿಸಿದ್ದಾರೆ. ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!