BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ದೇಶ

Kolkata ಆಸ್ಪತ್ರೆಯ ಶೌಚಾಲಯದಲ್ಲಿ ಶವವಾದ ನರ್ಸ್, ಬಾಗಿಲು ಒಡೆದು ಮೃತದೇಹ ಹೊರತೆಗೆದ ಪೊಲೀಸರು..!


ಕೊಲ್ಕೊತ್ತಾ, ಆಗಸ್ಟ್ 14 : ಕೊಲ್ಕೊತ್ತಾದ ನೀಲ್ರತನ್ ಸಿರ್ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 30 ವರ್ಷದ ನರ್ಸ್‌ವೊಬ್ಬರ ಮೃತದೇಹ ಶೌಚಾಲಯದಲ್ಲಿ ಪತ್ತೆಯಾಗಿದೆ. ಮೃತರನ್ನು ರೂಪಾಲಿ ಬರ್ಮನ್ (30) ಎಂದು ಗುರುತಿಸಲಾಗಿದೆ. ಆಸ್ಪತ್ರೆಯ ಒಂದು ಶೌಚಾಲಯದ ಬಾಗಿಲು ದೀರ್ಘ ಸಮಯದವರೆಗೆ ಮುಚ್ಚಿದ್ದರೂ ಒಳಗಿನಿಂದ ಯಾವುದೇ ಪ್ರತಿಕ್ರಿಯೆ ಬಂದಿರಲಿಲ್ಲ ಎನ್ನಲಾಗಿದೆ. ಪದೇ ಪದೇ ಕರೆ ಮಾಡಿದರೂ ಪ್ರತಿಕ್ರಿಯೆ ದೊರೆಯದ ಹಿನ್ನೆಲೆಯಲ್ಲಿ ಆಸ್ಪತ್ರೆ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಶೌಚಾಲಯದ ಬಾಗಿಲನ್ನು ಒಡೆದು ಒಳ ಪ್ರವೇಶಿಸಿದಾಗ ರೂಪಾಲಿ ಬರ್ಮನ್ ಅವರ ಮೃತದೇಹ ಪತ್ತೆಯಾಗಿದೆ. ಬಳಿಕ ಮೃತದೇಹವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಸದ್ಯ ನರ್ಸ್‌ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.


 

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!