BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ರಾಜ್ಯ

KPSC Chairman Shivashankarappa Sahukar Suspended ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಮತ್ತೊಮ್ಮೆ ಅಮಾನತು: ರಾಜ್ಯಪಾಲರಿಂದ ಆದೇಶ


ಬೆಂಗಳೂರು, ಆಗಸ್ಟ್ 25 : ಸಚಿವ ಸಂಪುಟದ ಸಲಹೆ ಮೇರೆಗೆ ಕರ್ನಾಟಕ ಲೋಕಸೇವಾ ಆಯೋಗದ (KPSC) ಅಧ್ಯಕ್ಷ ಶಿವಶಂಕರಪ್ಪ ಎಸ್. ಸಾಹುಕ‌ರ್ ಅವರನ್ನು ಅಮಾನತು ಮಾಡಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಆದೇಶ ಹೊರಡಿಸಿದೆ. ಈ ಕುರಿತು ರಾಜಭವನದಿಂದ ಅಧಿಕೃತ ಮಾಧ್ಯಮ ಹೇಳಿಕೆ ಬಿಡುಗಡೆಯಾಗಿದೆ. ಭಾರತದ ಸಂವಿಧಾನದ 317 (2)ನೇ ವಿಧಿಯ ಅಡಿಯಲ್ಲಿ, ರಾಷ್ಟ್ರಪತಿಗಳು ಮುಂದಿನ ಆದೇಶ ನೀಡುವವರೆಗೆ ಕೆಪಿಎಸ್‌ಸಿ ಅಧ್ಯಕ್ಷರನ್ನು ಅಮಾನತುಗೊಳಿಸಿರುವುದಾಗಿ ರಾಜ್ಯಪಾಲರು ಆದೇಶದಲ್ಲಿ ತಿಳಿಸಿದ್ದಾರೆ. ಕಳೆದ ತಿಂಗಳು ಸಚಿವ ಸಂಪುಟದ ಶಿಫಾರಸು ಇಲ್ಲದೆ ಹೊರಡಿಸಿದ್ದ ಅಮಾನತು ಆದೇಶವನ್ನು ಹೈಕೋರ್ಟ್ ರದ್ದುಪಡಿಸಿತ್ತು. ನಂತರ, ಆ.21 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಶಿವಶಂಕರಪ್ಪ ಸಾಹುಕಾರ್ ಅವರನ್ನು ಅಮಾನತುಗೊಳಿಸುವಂತೆ ರಾಜ್ಯಪಾಲರಿಗೆ ಶಿಫಾರಸು ಮಾಡಲು ತೀರ್ಮಾನಿಸಲಾಗಿತ್ತು. ಸಂಪುಟ ಸಭೆಯ ನೂತನ ಶಿಫಾರಸು ಹಾಗೂ ಆ.18 ರಂದು ಹೈಕೋರ್ಟ್ ನೀಡಿದ ತೀರ್ಪಿನ ಆದಾರದ ಮೇರೆಗೆ ಈಗ ಅಧಿಕೃತವಾಗಿ ಈ ಅಮಾನತು ಆದೇಶ ಹೊರಡಿಸಲಾಗಿದೆ.

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!