BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ರಾಜ್ಯ

KSRTC Bus Accident ಚಿಕ್ಕಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಶಾಪಿಂಗ್‌ಗೆ ಬಂದಿದ್ದ ತಾಯಿ-ಮಗ ಭೀಕರ ರಸ್ತೆ ಅಪಘಾತದಲ್ಲಿ ಸಾವು, ಮತ್ತೋರ್ವ ಗಂಭೀರ ..!


ಚಿಕ್ಕಬಳ್ಳಾಪುರ, ಆಗಸ್ಟ್ 22 :  ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ಪಟ್ಟಣದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಾಮಗ್ರಿ ಖರೀದಿಸಲು ಬಂದಿದ್ದ ತಾಯಿ ಮತ್ತು ಮಗ ರಸ್ತೆ ದಾಟುತ್ತಿದ್ದ ವೇಳೆ ಕೆಎಸ್‌ಆರ್‌ಟಿಸಿ ಬಸ್ ಹರಿದು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಶುಕ್ರವಾರ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಮತ್ತೋರ್ವ ಮಗ ಗಾಯಗೊಂಡಿದ್ದಾನೆ. ಗೌರಿಬಿದನೂರು ತಾಲೂಕಿನ ಕಾದಲವೇಣಿ ಗ್ರಾಮದ ನಿವಾಸಿ ಸುರೇಶ್ ಎಂಬುವರ ಪತ್ನಿ ನಾಗಮಣಿ (35) ಹಾಗೂ ಇವರ 14 ವರ್ಷದ ಮಗ ಗಗನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೊಬ್ಬ ಮಗ ಚಂದನ್ ಪ್ರಾಣಾಪಾಯದಿಂದ ಪಾರಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತ ನಾಗಮಣಿ ಅವರು ಶುಕ್ರವಾರ ಸಂಜೆ ತಮ್ಮ ಇಬ್ಬರು ಮಕ್ಕಳೊಂದಿಗೆ ಹಬ್ಬದ ಸಾಮಗ್ರಿಗಳನ್ನು ಖರೀದಿಸಲು ಗೌರಿಬಿದನೂರು ಪಟ್ಟಣಕ್ಕೆ ಬಂದಿದ್ದರು.

ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ರಸ್ತೆ ದಾಟುತ್ತಿದ್ದ ವೇಳೆ, ಬಸ್ ನಿಲ್ದಾಣದಿಂದ ಮಧುಗಿರಿ ಕಡೆಗೆ ಹೊರಟಿದ್ದ ಕೆಎಸ್‌ಆರ್‌ಟಿಸಿ ಬಸ್ ವೃತ್ತದಲ್ಲಿ ತಿರುವು ಪಡೆಯುವಾಗ ತಾಯಿ ಮತ್ತು ಮಕ್ಕಳ ಮೇಲೆ ಹರಿದಿದೆ. ಚಾಲಕನ ಅತಿವೇಗವೇ ಈ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ವಿಷಯ ತಿಳಿದು ಸ್ಥಳಕ್ಕೆ ಗೌರಿಬಿದನೂರು ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಬಸ್ ಚಾಲಕನನ್ನು ವಶಕ್ಕೆ ಪಡೆದು ಮುಂದಿನ ತನಿಖೆ ಕೈಗೊಂಡಿದ್ದಾರೆ.

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!