BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ಉಡುಪಿ

LPG Gas Price down ವಾಣಿಜ್ಯ ಸಿಲಿಂಡರ್‌ (Commercial LPG Cylinder) ಬಳಕೆದಾರರಿಗೆ ಗುಡ್‌ನ್ಯೂಸ್‌, ಸಿಲಿಂಡರ್‌ ಬೆಲೆ 200 ರೂ. ಇಳಿಕೆ


ನವದೆಹಲಿ,ಆಗಸ್ಟ್01 : ವಾಣಿಜ್ಯ ಸಿಲಿಂಡರ್‌ (Commercial LPG Cylinder) ಬಳಕೆದಾರರಿಗೆ ಕೇಂದ್ರ ಸರ್ಕಾರ  ಗುಡ್‌ನ್ಯೂಸ್‌ ನೀಡಿದ್ದು, ವಾಣಿಜ್ಯ ಸಿಲಿಂಡರ್‌ ಬೆಲೆ 200 ರೂ. ಇಳಿಕೆ ಮಾಡಿದೆ. ಇದರಿಂದ ಬಹುದಿನಗಳ ಬಳಿಕ ವಾಣಿಜ್ಯ ಸಿಲಿಂಡರ್‌  ಬಳಕೆದಾರರು ನಿಟ್ಟುಸಿರು ಬಿಡುವಂತಾಗಿದೆ. ಆದ್ರೆ ಗೃಹಬಳಕೆ ಸಿಲಿಂಡರ್‌ನಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ದೆಹಲಿ, ಕೋಲ್ಕತ್ತಾ ಸೇರಿದಂತೆ ಹಲವು ಮಹಾನಗರಗಲ್ಲಿ ವಾಣಿಜ್ಯ ಸಿಲಿಂಡರ್‌ ಬೆಲೆ (LPG Cylinder Price) 200 ರೂ.ಗಳಷ್ಟು ಇಳಿಕೆಯಾಗಿದೆ. ಶನಿವಾರ ಕೋಲ್ಕತ್ತಾದಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್‌ ಬೆಲೆ 209, ದೆಹಲಿಯಲ್ಲಿ (Delhi) 202 ರೂ.ಗಳಷ್ಟು ಇಳಿಕೆಯಾಗಿದೆ. ಬೆಂಗಳೂರಿನಲ್ಲಿ 200 ರೂ. ಇಳಿಕೆಯಾಗಿದ್ದು, ಪರಿಷ್ಕೃತ ದರ ಇಂದಿನಿಂದಲೇ ಜಾರಿಯಾಗಲಿದೆ.ಕೋಲ್ಕತ್ತಾದಲ್ಲಿ (Kolkata) ಪ್ರತಿ 19 ಕೆಜಿ ವಾಣಿಜ್ಯ ಸಿಲಿಂಡರ್‌ ಬೆಲೆ 209 ರೂ. ಇಳಿಕೆಯಾಗಿದ್ದು ಪ್ರತಿ ಸಿಲಿಂಡರ್‌ ಬೆಲೆ 2,872.50 ರೂ.ಗೆ ಇಳಿಕೆಯಾಗಿದೆ. ದೆಹಲಿಯಲ್ಲಿ ಪ್ರತಿ ಸಿಲಿಂಡರ್‌ ಮೇಲಿನ ಬೆಲೆ 202 ರೂ. ಇಳಿಕೆಯಾಗಿದ್ದು, 2,728 ರೂ.ಗೆ ಇಳಿದಿದೆ. ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಚಿಲ್ಲರೆ ಬೆಲೆ (ರೀಟೇಲ್‌ ದರ) 2,930ರೂ. ರಷ್ಟಿದ್ದು, ಹೊಸ ದರಗಳು ಜುಲೈ 1 ರಿಂದ ಜಾರಿಗೆ ಬಂದಿವೆ.

ಒಟ್ಟಿನಲ್ಲಿ ಬೆಲೆ ಇಳಿಕೆಯು ಇದು ರೆಸ್ಟೋರೆಂಟ್‌ಗಳು, ಹೋಟೆಲ್‌ಗಳು, ಫಾಸ್ಟ್‌ಫುಡ್‌ ಹಾಗೂ ಕ್ಯಾಟರಿಂಗ್‌ ಮಾಲೀಕರಿಗೆ ಗುಡ್‌ನ್ಯೂಸ್‌ ಕೊಟ್ಟಂತಾಗಿದೆ. 

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!