BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ದಕ್ಷಿಣ ಕನ್ನಡ

Managluru ರಾಷ್ಟ್ರಗೀತೆಗೆ ಅವಮಾನ ಆರೋಪ,: ಸೋನಿಯಾ ಗಾಂಧಿ ವಿರುದ್ಧ ಉರ್ವ ಪೊಲೀಸ್ ಠಾಣೆಯಲ್ಲಿ ದೂರು..!


ಮಂಗಳೂರು, ಆಗಸ್ಟ್ 16 : ರಾಷ್ಟ್ರಗೀತೆಯಾದ 'ವಂದೇ ಮಾತರಂ'ಗೆ ಅವಮಾನ ಮಾಡಲಾಗಿದೆ ಮತ್ತು ಶಾಂತಿಭಂಗ ಉಂಟುಮಾಡಲು ಯತ್ನಿಸಲಾಗಿದೆ ಎಂಬ ಆರೋಪದಡಿ, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ವಿರುದ್ಧ ಮಂಗಳೂರಿನ ಉರ್ವ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

 ಬಂಟ್ವಾಳದ ನಿವಾಸಿ ವಿಕಾಸ್ ಪಿ. ಎಂಬುವರು ಈ ದೂರು ಸಲ್ಲಿಸಿದ್ದಾರೆ. ಆಗಸ್ಟ್ 15, 2026ರಂದು ದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಧ್ವಜಾರೋಹಣ ಕಾರ್ಯಕ್ರಮದ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.



'ರಿಪಬ್ಲಿಕ್ ಡಿಜಿಟಲ್' ಯೂಟ್ಯೂಬ್ ಚಾನೆಲ್‌ನಲ್ಲಿ ಪ್ರಸಾರವಾದ ಕಾರ್ಯಕ್ರಮವನ್ನು ವೀಕ್ಷಿಸುತ್ತಿದ್ದಾಗ, ವಂದೇ ಮಾತರಂ ಗೀತೆಯನ್ನು ಪ್ರಸ್ತುತಪಡಿಸುತ್ತಿದ್ದ ವೇಳೆ ಸೋನಿಯಾ ಗಾಂಧಿಯವರು ರಾಷ್ಟ್ರಗೀತೆಗೆ ಅಗೌರವ ತೋರಿದ್ದಾರೆ ಮತ್ತು ಅದನ್ನು ತಡೆಯುವಂತೆ ಸೂಚಿಸಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ.

ರಾಷ್ಟ್ರಗೀತೆಯು ದೇಶದ ಸ್ವಾತಂತ್ರ್ಯ ಹೋರಾಟದ ಸಂಕೇತವಾಗಿದೆ. ರಾಷ್ಟ್ರಗೀತೆಗೆ ಅವಮಾನ ಮಾಡುವುದು ಮತ್ತು ಅದರ ಪ್ರಸ್ತುತತೆಗೆ ಅಡ್ಡಿಪಡಿಸುವುದು ದೇಶದ್ರೋಹದ ಕೃತ್ಯ ಎಂದು ವಿಕಾಸ್ ಪಿ. ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

ಈ ಕುರಿತು 'ರಾಷ್ಟ್ರೀಯ ಗೌರವಕ್ಕೆ ಅವಮಾನ ತಡೆಗಟ್ಟುವಿಕೆ ಕಾಯ್ದೆ'ಯ ಕಲಂ 3 ಹಾಗೂ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 195 ಮತ್ತು 352ರ ಅಡಿಯಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ದೂರುದಾರರು ಪೊಲೀಸರನ್ನು ಕೋರಿದ್ದಾರೆ. ಸದ್ಯ ಉರ್ವ ಪೊಲೀಸರು ದೂರು ಸ್ವೀಕರಿಸಿದ್ದು, ಮುಂದಿನ ಕಾನೂನು ಪ್ರಕ್ರಿಯೆ ನಡೆಸುತ್ತಿದ್ದಾರೆ.

https://youtu.be/FvZ2Un2_s-k

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!