BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ದಕ್ಷಿಣ ಕನ್ನಡ

Mangaluru| ಕೆನರಾ ಇಂಜಿನಿಯರಿಂಗ್ ಕಾಲೇಜಿನಲ್ಲಿ ರಕ್ತದಾನ ಶಿಬಿರ: 43 ಯೂನಿಟ್ ರಕ್ತ ಸಂಗ್ರಹ


ಮಂಗಳೂರು, ಆಗಸ್ಟ್ 20 : ಕೆನರಾ ಇಂಜಿನಿಯರಿಂಗ್ ಕಾಲೇಜಿನ ಎನ್‌ಎಸ್‌ಎಸ್ (NSS), ರೆಡ್ ಕ್ರಾಸ್ ಘಟಕ, ವಿದ್ಯಾರ್ಥಿಗಳ ಇ.ಎಸ್.ಆರ್. ಕ್ಲಬ್ ಹಾಗೂ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಸಂಯುಕ್ತ ಆಶ್ರಯದಲ್ಲಿ ರಕ್ತದಾನ ಶಿಬಿರವು ಕಾಲೇಜಿನಲ್ಲಿ ಬುಧವಾರ ಯಶಸ್ವಿಯಾಗಿ ಜರುಗಿತು.

ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಡಾ. ದೀಪಿಕಾ ಹಾಗೂ ಅವರ ಬಳಗದ ಮಾರ್ಗದರ್ಶನದಲ್ಲಿ, ಬ್ಲಡ್ ಬ್ಯಾಂಕ್ ಮುಖ್ಯಸ್ಥ ಆಂಟನಿ ಡಿ ಸೋಜಾ ಅವರು ರಕ್ತದಾನಿಗಳಿಂದ ರಕ್ತ ಸಂಗ್ರಹಿಸುವ ಪ್ರಕ್ರಿಯೆಯನ್ನು ಅಚ್ಚುಕಟ್ಟಾಗಿ ನಡೆಸಿಕೊಟ್ಟರು.

ಈ ಶಿಬಿರದಲ್ಲಿ ಕಾಲೇಜಿನ ಬೋಧಕ ಸಿಬ್ಬಂದಿ, ಬೋಧಕೇತರ ಸಿಬ್ಬಂದಿ ಹಾಗೂ ಉತ್ಸಾಹಿ ವಿದ್ಯಾರ್ಥಿಗಳು ದೊಡ್ಡ ಸಂಖ್ಯೆಯಲ್ಲಿ ಪಾಲ್ಗೊಂಡು ರಕ್ತದಾನ ಮಾಡಿದರು. ಒಟ್ಟಾರೆಯಾಗಿ ಈ ಶಿಬಿರದಲ್ಲಿ 43 ಯೂನಿಟ್ ರಕ್ತವನ್ನು ಸಂಗ್ರಹಿಸಲಾಯಿತು. ಕಾಲೇಜಿನ ಸಹ ಪ್ರಾಧ್ಯಾಪಕ ಅನಂತಕೃಷ್ಣ ಕಾಮತ್ ಅವರು ಈ ಕಾರ್ಯಕ್ರಮದ ಸಮನ್ವಯಕಾರರಾಗಿ ಯಶಸ್ಸಿಗೆ ಸಹಕರಿಸಿದರು.

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!