BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ದಕ್ಷಿಣ ಕನ್ನಡ

Alvas Pragati ಆಗಸ್ಟ್ 7, 8 'ಆಳ್ವಾಸ್‌ ಪ್ರಗತಿ' ಬೃಹತ್ ಉದ್ಯೋಗ ಮೇಳ ಹಿನ್ನೆಲೆ ಮಂಗಳೂರಿನಲ್ಲಿ ಉಚಿತ ಉದ್ಯೋಗ ಮಾರ್ಗದರ್ಶನ,ಸಂದರ್ಶನ ತರಬೇತಿ ಕಾರ್ಯಗಾರ

ಮಂಗಳೂರು, ಆಗಸ್ಟ್ 04 : ಇದೇ ಆಗಸ್ಟ್ 7 ಮತ್ತು 8 ರಂದು ಮೂಡುಬಿದಿರೆಯ ಆಳ್ವಾಸ್‌ನ ವಿದ್ಯಾಗಿರಿ ಆವರಣದಲ್ಲಿ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಆಯೋಜಿಸುತ್ತಿರುವ 16ನೇ ಆವೃತ್ತಿಯ 'ಆಳ್ವಾಸ್‌ ಪ್ರಗತಿ' ಬೃಹತ್ ಉದ್ಯೋಗ ಮೇಳದ ಕುರಿತು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಉಚಿತ ಉದ್ಯೋಗ ಮಾರ್ಗದರ್ಶನ ಹಾಗೂ ಸಂದರ್ಶನ ತರಬೇತಿ ಕಾರ್ಯಗಾರವು ನಗರದ ಟಿ.ವಿ ರಮಣ್ ಪೈ ಸಭಾಂಗಣದಲ್ಲಿ ನಡೆಯಿತು.


ಈ ವೇಳೆ ಮಾತನಾಡಿದ ಶಾಸಕರು, ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕೆನರಾ ಹಾಗೂ ಆಳ್ವಾಸ್ ಶಿಕ್ಷಣ ಸಂಸ್ಥೆಗಳು ಜಂಟಿಯಾಗಿ ಆಯೋಜನೆ ಮಾಡಿರುವ ಈ ಮಾಹಿತಿ ಶಿಬಿರವು ನಿಮ್ಮೆಲ್ಲರಿಗೂ ಉಪಯೋಗವಾದರೆ ಅದಕ್ಕಿಂತ ಖುಷಿಯ ಸಂಗತಿ ಬೇರೊಂದಿಲ್ಲ. ನಿಮ್ಮ ಉತ್ತಮ ಭವಿಷ್ಯಕ್ಕಾಗಿ ಹೆತ್ತವರು ಆಸೆಕಂಗಳಿಂದ ಕಾಯುತ್ತಿದ್ದು ಅವರನ್ನು ನಿರಾಸೆಗೊಳಿಸಬೇಡಿ. ಆಳ್ವಾಸ್ ಪ್ರಗತಿ ಇಂದು ದೇಶದ ಅತಿದೊಡ್ಡ ಉದ್ಯೋಗ ಮೇಳವಾಗಿದ್ದು, ದಯವಿಟ್ಟು ಇದರ ಪ್ರಯೋಜನ ಪಡೆದುಕೊಳ್ಳಿ ಎಂದು ಮನವಿ ಮಾಡಿದರು. 

ಉದ್ಯೋಗ ಮೇಳದ ಸಂಪೂರ್ಣ ಮಾಹಿತಿ ನೀಡಿದ ಆಳ್ವಾಸ್ ಶಿಕ್ಷಣ ಸಂಸ್ಥೆಯ ವಿವೇಕ್ ಆಳ್ವರವರು, ಈ ವರ್ಷ 350 ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸುವ ನಿರೀಕ್ಷೆಯಿದ್ದು, 24 ಸಾವಿರಕ್ಕೂ ಹೆಚ್ಚು ಉದ್ಯೋಗಾವಕಾಶಗಳು ಲಭ್ಯವಿವೆ. ಎಲ್ಲಾ ಪ್ರಕ್ರಿಯೆಯನ್ನು ಸುಗಮ, ಪಾರದರ್ಶಕ ಹಾಗೂ ಡಿಜಿಟಲ್ ರೂಪದಲ್ಲಿ ನಡೆಸುವ ಉದ್ದೇಶದಿಂದ ಎಲ್ಲಾ ಅಭ್ಯರ್ಥಿಗಳಿಗೆ ಉಚಿತ ಆನ್‌ಲೈನ್ ನೋಂದಣಿ ಕಡ್ಡಾಯಗೊಳಿಸಲಾಗಿದೆ ಎಂದರು. ಕೆನರಾ ಆಡಳಿತ ಮಂಡಳಿ ಸದಸ್ಯರು ಹಾಗೂ ಸಿ.ಎ ಗಿರಿಧರ್ ಕಾಮತ್ ಮೊದಲಾದವರು ಉಪಸ್ಥಿತರಿದ್ದರು. ವಿವಿಧ ಕಾಲೇಜುಗಳ ಸುಮಾರು 500 ಕ್ಕೂ ಹೆಚ್ಚು ಉದ್ಯೋಗಾಂಕಾಕ್ಷಿಗಳು ನೋಂದಣಿ ಮಾಡಿಕೊಂಡರು.

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!