ಮಂಗಳೂರು, ಆಗಸ್ಟ್ 29 : ಮಂಗಳೂರು ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ ಎಂಟು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಪೂರ್ವ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಮುಕ್ಕಚೇರಿ ಸಮೀಪದ ಹಿಲರಿನಗರ ನಿವಾಸಿ ಮುವಾಝ್ (45) ಬಂಧಿತ ಆರೋಪಿಯಾಗಿದ್ದು, ಈತ ಇಷ್ಟು ದಿನ ಕೇರಳದ ಇರಿಕ್ಕೂರುನಲ್ಲಿ ವಾಸವಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣದ ಹಿನ್ನೆಲೆ:
ಮುವಾಝ್ ವಿರುದ್ಧ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಹಿಂದೆ ಪ್ರಕರಣ ದಾಖಲಾಗಿತ್ತು. ಆದರೆ ಈತ ವಿಚಾರಣೆಗಾಗಿ ನ್ಯಾಯಾಲಯಕ್ಕೆ ಹಾಜರಾಗದೆ ದೀರ್ಘಕಾಲದಿಂದ ತಲೆಮರೆಸಿಕೊಂಡಿದ್ದನು. ಈ ಹಿನ್ನೆಲೆಯಲ್ಲಿ ನ್ಯಾಯಾಲಯವು ಆತನ ವಿರುದ್ಧ ಎಲ್‌ಪಿಸಿ (LPC) ವಾರಂಟ್ ಹೊರಡಿಸಿತ್ತು. ಖಚಿತ ಮಾಹಿತಿ ಪಡೆದ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದು, ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.