BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ದಕ್ಷಿಣ ಕನ್ನಡ

Mangaluru city corporation ಮಂಗಳೂರು ನಗರದ ಮೂಲಸೌಕರ್ಯ ಅಭಿವೃದ್ಧಿ: ವಿವಿಧೆಡೆ ಭೇಟಿ ನೀಡಿ ಪರಿಶೀಲಿಸಿದ ಮನಪಾ ಆಯುಕ್ತ ರಾಹುಲ್ ರತ್ನಂ ಪಾಂಡೆ, IAS..!

ಮಂಗಳೂರು, ಆಗಸ್ಟ್ 21 : ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರಾದ ರಾಹುಲ್ ರತ್ನಂ ಪಾಂಡೆ, IAS ಅವರು 'ಕ್ರೆಡೈ' (CREDAI) ಅಧ್ಯಕ್ಷರು, ಸದಸ್ಯರು ಹಾಗೂ 'ಎಸಿಸಿಇ' (ACCE) ಕಾರ್ಯದರ್ಶಿಯವರೊಂದಿಗೆ ಶುಕ್ರವಾರ ನಗರದ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ, ಮೂಲಸೌಕರ್ಯ ಹಾಗೂ ಅಭಿವೃದ್ಧಿ ಸಮಸ್ಯೆಗಳನ್ನು ಸ್ಥಳದಲ್ಲೇ ಪರಿಶೀಲಿಸಿದರು.

ಸಂಘನಿಕೇತನ (ಮಣ್ಣಗುಡ್ಡ), ಉರ್ವ-ಚಿಲಿಂಬಿ, ಕೊಟ್ಟಾರ ಚೌಕಿ, ಕೆಪಿಟಿ–ಯೆಯ್ಯಾಡಿ ರಸ್ತೆ, ಶಕ್ತಿನಗರ, ಹಂಪನಕಟ್ಟೆ, ಪಂಪ್‌ವೆಲ್ ಹೆದ್ದಾರಿ ಹಾಗೂ ಕುಂಟಿಕಾನ ಹೆದ್ದಾರಿ ಪ್ರದೇಶಗಳಿಗೆ ಅಧಿಕಾರಿಗಳ ತಂಡ ಭೇಟಿ ನೀಡಿತು. ಈ ವೇಳೆ ಒಳಚರಂಡಿ ವ್ಯವಸ್ಥೆ (UGD), ಮಳೆನೀರು ಚರಂಡಿ ನಿರ್ವಹಣೆ, ಪಾದಚಾರಿ ಮಾರ್ಗ ಹಾಗೂ ರಸ್ತೆ ಸಮಸ್ಯೆಗಳ ಕುರಿತು 'ಕ್ರೆಡೈ' ಸದಸ್ಯರು ಆಯುಕ್ತರಿಗೆ ವಿವರವಾದ ಮಾಹಿತಿ ನೀಡಿದರು. ಅಲ್ಲದೆ, ಈಗಾಗಲೇ ಕೈಗೊಳ್ಳಲಾಗಿರುವ ಹಾಗೂ ಮುಂದಿನ ದಿನಗಳಲ್ಲಿ ಅನುಷ್ಠಾನಗೊಳ್ಳಬೇಕಿರುವ ಅಭಿವೃದ್ಧಿ ಕಾಮಗಾರಿಗಳ ಬಗ್ಗೆಯೂ ಅಧಿಕಾರಿಗಳು ಚರ್ಚಿಸಿದರು.

ನಗರ ಅಭಿವೃದ್ದಿಗೆ ಪ್ರಮುಖ ಸೂಚನೆಗಳು ಮತ್ತು ಸಲಹೆಗಳು:

ನಗರದ ಮೂಲಸೌಕರ್ಯ ಹಾಗೂ ರಸ್ತೆ ಅಭಿವೃದ್ಧಿ ಕುರಿತು ಚರ್ಚಿಸಿದ ಆಯುಕ್ತರು, ಸಾರ್ವಜನಿಕರ ಸಂಚಾರವನ್ನು ಸುಗಮಗೊಳಿಸುವ ನಿಟ್ಟಿನಲ್ಲಿ ಯೆಯ್ಯಾಡಿ ಜಂಕ್ಷನ್‌ನಲ್ಲಿ ಟ್ರಾಫಿಕ್ ಸಿಗ್ನಲ್ ಅಳವಡಿಸುವ ಸಾಧ್ಯತೆಗಳನ್ನು ಪರಿಶೀಲಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಜೊತೆಗೆ, ಅತಿಯಾದ ಸಂಚಾರ ದಟ್ಟಣೆ ತಪ್ಪಿಸಲು ಸೂಕ್ತ ಸ್ಥಳಗಳಲ್ಲಿ ಬಸ್ ನಿಲ್ದಾಣ ಹಾಗೂ ಬಸ್ ಬೇಗಳನ್ನು ರೂಪಿಸುವಂತೆ ಸಲಹೆ ನೀಡಿದರು.

ರಸ್ತೆಯ ಎರಡೂ ಬದಿಗಳಲ್ಲಿ ಸುಸ್ಥಿರವಾದ ಇಂಟರ್‌ಲಾಕಿಂಗ್ ವ್ಯವಸ್ಥೆ ಕಲ್ಪಿಸುವುದು ಮತ್ತು ಪಾದಚಾರಿಗಳ ಸುರಕ್ಷತೆಗಾಗಿ ಸಮರ್ಪಕ ಕಾಲುದಾರಿಗಳನ್ನು (Footpaths) ನಿರ್ವಹಿಸುವಂತೆಯೂ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು. ಈ ಪರಿಶೀಲನಾ ಭೇಟಿಯ ಸಂದರ್ಭದಲ್ಲಿ ಪಾಲಿಕೆಯ ನಗರ ಯೋಜನಾ ಹಾಗೂ ಇಂಜಿನಿಯರಿಂಗ್ ವಿಭಾಗದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!