BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ದಕ್ಷಿಣ ಕನ್ನಡ

Mangaluru Man rescued From Lift ಮಂಗಳೂರು: ಲಿಫ್ಟ್‌ನಲ್ಲಿ ಸಿಲುಕಿದ್ದ ಅಸ್ಸಾಂ ಮೂಲದ ವ್ಯಕ್ತಿ – ಅಗ್ನಿಶಾಮಕ ದಳದಿಂದ ಯಶಸ್ವಿ ರಕ್ಷಣೆ


ಮಂಗಳೂರು,ಆಗಸ್ಟ್ 31: ನಗರದ ಪಾಂಡೇಶ್ವರದ ಶ್ರೀನಿವಾಸ ಕಾಲೇಜು ಎದುರಿನ ಅಪಾರ್ಟ್‌ಮೆಂಟ್‌ನ ಲಿಫ್ಟ್‌ನಲ್ಲಿ ಸೋಮವಾರ ಬೆಳಗ್ಗಿನ ಜಾವ ಸಿಕ್ಕಿಹಾಕಿಕೊಂಡಿದ್ದ ಅಸ್ಸಾಂ ಮೂಲದ ಕೇಶವ (33) ಅವರನ್ನು ಪಾಂಡೇಶ್ವರ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಸುರಕ್ಷಿತವಾಗಿ ರಕ್ಷಿಸಿದ್ದಾರೆ.

ನೈಟ್ ಶಿಫ್ಟ್ (ರಾತ್ರಿಪಾಳಿ) ಮುಗಿಸಿ ಅಪಾರ್ಟ್‌ಮೆಂಟ್‌ಗೆ ವಾಪಸಾದ ಕೇಶವ ಅವರು ಲಿಫ್ಟ್ ಹತ್ತಿದಾಗ ತಾಂತ್ರಿಕ ದೋಷದಿಂದ ಬಾಗಿಲು ತೆರೆಯದೆ ಒಳಗೆ ಸಿಲುಕಿಕೊಂಡಿದ್ದರು. ಕೂಡಲೇ ಎಚ್ಚೆತ್ತ ಅಪಾರ್ಟ್‌ಮೆಂಟ್ ಸಿಬ್ಬಂದಿ ಹೆಚ್ಚುವರಿ ಕೀ ಬಳಸಿ ಬಾಗಿಲು ತೆರೆಯಲು ಹಲ್ ಪ್ರಯತ್ನ ನಡೆಸಿದರಾದರೂ ಫಲಕಾರಿಯಾಗಲಿಲ್ಲ.



ಪರಿಸ್ಥಿತಿಯ ಗಂಭೀರತೆ ಅರಿತ ಅಪಾರ್ಟ್‌ಮೆಂಟ್ ಆಡಳಿತ ಮಂಡಳಿಯು ಕೂಡಲೇ ಪಾಂಡೇಶ್ವರ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದೆ. ತಕ್ಷಣವೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಸಕಾಲಿಕ ಹಾಗೂ ಅತ್ಯಾಧುನಿಕ ಕಾರ್ಯಾಚರಣೆ ನಡೆಸಿ, ಲಿಫ್ಟ್‌ನಲ್ಲಿ ಸಿಲುಕಿ ಪರದಾಡುತ್ತಿದ್ದ ಕೇಶವ ಅವರನ್ನು ಯಾವುದೇ ಅಪಾಯವಿಲ್ಲದೆ ಸುರಕ್ಷಿತವಾಗಿ ಹೊರಬರುವಂತೆ ಮಾಡಿದರು. ಸಮಯೋಚಿತ ಕಾರ್ಯಾಚರಣೆ ನಡೆಸಿದ ಅಗ್ನಿಶಾಮಕ ಸಿಬ್ಬಂದಿಯ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಪ್ರಶಂಸೆ ವ್ಯಕ್ತವಾಗಿದೆ.

https://www.facebook.com/reel/1847085886259816

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!