BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ದಕ್ಷಿಣ ಕನ್ನಡ

Mangaluru oldman Recued fire Firemen ಮಂಗಳೂರು: ಮನೆಯಲ್ಲಿ ಅಸ್ವಸ್ಥರಾಗಿ ಬಿದ್ದಿದ್ದ 75 ವರ್ಷದ ವೃದ್ಧನನ್ನು ರಕ್ಷಿಸಿದ ಪಾಂಡೇಶ್ವರ ಅಗ್ನಿಶಾಮಕ ದಳ!


ಮಂಗಳೂರು, ಆಗಸ್ಟ್ 23 :  ಮನೆಯಲ್ಲಿ ಅಸ್ವಸ್ಥರಾಗಿ ಬಿದ್ದಿದ್ದ 75 ವರ್ಷದ ವೃದ್ಧರೊಬ್ಬರನ್ನು ಮಂಗಳೂರು ನಗರದ ಪಾಂಡೇಶ್ವರ ಅಗ್ನಿಶಾಮಕ ದಳದ ಸಿಬ್ಬಂದಿ ಸಮಯೋಚಿತವಾಗಿ ರಕ್ಷಿಸಿದ್ದಾರೆ.

ಮಂಗಳೂರಿನ ಪಾಂಡೇಶ್ವರದ ಓಲ್ಡ್ ಕೆಂಟ್ ರಸ್ತೆಯಲ್ಲಿರುವ ಮೋತಿಶ್ಯಾಮ್ ಅಪಾರ್ಟ್‌ಮೆಂಟ್‌ನಲ್ಲಿ ಈ ಘಟನೆ ನಡೆದಿದೆ. 75 ವರ್ಷದ ಪ್ರಭಾತ್ ಕಿರಣ್ ಕಳೆದ ಕೆಲವು ವರ್ಷಗಳಿಂದ ಈ ಅಪಾರ್ಟ್‌ಮೆಂಟ್‌ನಲ್ಲಿ ಏಕಾಂಗಿಯಾಗಿ ವಾಸಿಸುತ್ತಿದ್ದರು.

ಆದರೆ, ಕಳೆದ ಕೆಲವು ದಿನಗಳಿಂದ ಮನೆ ಲಾಕ್ ಆಗಿದ್ದು, ವೃದ್ಧರ ಯಾವುದೇ ಚಟುವಟಿಕೆಗಳು ಕಂಡುಬಂದಿರಲಿಲ್ಲ. ಇದರಿಂದ ಅನುಮಾನಗೊಂಡ ಅಪಾರ್ಟ್‌ಮೆಂಟ್ ನಿವಾಸಿಗಳು ತಕ್ಷಣವೇ ಪಾಂಡೇಶ್ವರ ಅಗ್ನಿಶಾಮಕ ದಳಮತ್ತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ, ಬಾಗಿಲು ಒಡೆದು ಒಳಪ್ರವೇಶಿಸಿದ್ದಾರೆ. ಈ ವೇಳೆ ವೃದ್ಧ ಪ್ರಭಾತ್ ಕಿರಣ್ ಅವರು ಮನೆಯೊಳಗೆ ಅಸ್ವಸ್ಥರಾಗಿ, ಅರೆ ಪ್ರಜ್ಞಾವಸ್ಥೆಯಲ್ಲಿ ಬಿದ್ದಿರುವುದು ಕಂಡುಬಂದಿದೆ.

ಕೂಡಲೇ ಎಚ್ಚೆತ್ತ ಸಿಬ್ಬಂದಿ ಅವರನ್ನು ರಕ್ಷಿಸಿ, ಆಂಬುಲೆನ್ಸ್ ಮೂಲಕ ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಏಕಾಂಗಿಯಾಗಿದ್ದ ವೃದ್ಧರೊಬ್ಬರ ಜೀವ ಉಳಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಯ ಸಾಹಸ ಹಾಗೂ ಕಾರ್ಯಕ್ಷಮತೆಗೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. 

https://youtu.be/qNGD92O2MVk

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!