BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ದಕ್ಷಿಣ ಕನ್ನಡ

Mangaluru police ಮಾದಕ ವಸ್ತು ಮಾರಾಟ ಜಾಲದ ಮೇಲೆ ಮಂಗಳೂರು ಪೊಲೀಸರ ಸಕ್ಕತ್ ಬೇಟೆ; MDMA ಹಾಗೂ ಗಾಂಜಾ ಸಮೇತ ಇಬ್ಬರ ಬಂಧನ..!


ಮಂಗಳೂರು, ಆಗಸ್ಟ್ 19 :ಮಂಗಳೂರು ನಗರದಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರು ಪ್ರತ್ಯೇಕ ಪ್ರಕರಣಗಳಲ್ಲಿ ಪೊಲೀಸರ ಅತಿಥಿಯಾಗಿದ್ದಾರೆ. ಮಂಗಳೂರು ಪೂರ್ವ(ಕದ್ರಿ) ಹಾಗೂ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಕಾರ್ಯಾಚರಣೆ ನಡೆದಿದೆ.

ಪ್ರಕರಣ 1: ಪಂಪ್ವೆಲ್‌ನಲ್ಲಿ MDMA ವಶ, ಕೇರಳ ಮೂಲದ ವ್ಯಕ್ತಿ ಬಂಧನ ಮಂಗಳೂರು ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಪಂಪ್ವೆಲ್‌ನಿಂದ ನಂತೂರು ಕಡೆಗೆ ತೆರಳುವ ಸರ್ವಿಸ್ ರಸ್ತೆಯಲ್ಲಿ ಆಟೋ ರಿಕ್ಷಾದಲ್ಲಿ ಅಕ್ರಮವಾಗಿ MDMA ಮಾರಾಟ ಮಾಡುತ್ತಿದ್ದ ಕೇರಳ ಮೂಲದ ಮೊಹಮ್ಮದ್ ಇರ್ಷಾದ್ (30) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಯಿಂದ 1.36 ಲಕ್ಷ ರೂ. ಮೌಲ್ಯದ 13.69 ಗ್ರಾಂ MDMA, ನಗದು ಹಾಗೂ ಕೃತ್ಯಕ್ಕೆ ಬಳಸಿದ ಆಟೋ ರಿಕ್ಷಾ ಸೇರಿದಂತೆ ಒಟ್ಟು 2,94,500 ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಕುರಿತು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಪ್ರಕರಣ 2: ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು; ಥೆರಪಿಸ್ಟ್ ಅರೆಸ್ಟ್ ಸುರತ್ಕಲ್ ಠಾಣಾ ವ್ಯಾಪ್ತಿಯಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಮಾಡುತ್ತಿದ್ದ ನಿತಿನ್ ಕೃಷ್ಣನ್ (27) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಗಾಂಜಾ ಸೇವನೆ ಪ್ರಕರಣದ ಆರೋಪಿಯೊಬ್ಬ ನೀಡಿದ ಸುಳಿವಿನ ಮೇರೆಗೆ ಕದ್ರಿ ಗ್ರಾಮದ ಪದವು ಮೈದಾನದ ಬಳಿ ದಾಳಿ ನಡೆಸಲಾಗಿದೆ.

ಆರೋಪಿ ಕದ್ರಿ ಆಯುರ್ವೇದ ಕ್ಲಿನಿಕ್‌ನಲ್ಲಿ ಥೆರಪಿಸ್ಟ್ ಆಗಿ ಕೆಲಸ ಮಾಡುತ್ತಿದ್ದನು. ಈತನ ವಶದಿಂದ 60,000 ರೂ. ಮೌಲ್ಯದ 1.206 ಕೆ.ಜಿ. ಗಾಂಜಾ, ಮೊಬೈಲ್ ಫೋನ್ ಹಾಗೂ KTM ಮೋಟಾರ್ ಸೈಕಲ್ ಅನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿದ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!