ಮಂಗಳೂರು, ಆಗಸ್ಟ್ 14 : ಮಂಗಳೂರು ನಗರದಲ್ಲಿ ಪಾದಚಾರಿಗಳ ಸುರಕ್ಷತೆ ಮತ್ತು ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗುತ್ತಿರುವವರ ವಿರುದ್ಧ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ಕಠಿಣ ಕ್ರಮಗಳನ್ನು ಕೈಗೊಂಡಿದೆ. ನಗರದಲ್ಲಿ ಸಂಚಾರ ನಿಯಮ ಉಲ್ಲಂಘನೆ ತಡೆಯಲು ವಿಶೇಷ ಕಾರ್ಯಾಚರಣೆ ಮುಂದುವರಿದಿದೆ.
ಮಂಗಳೂರು ನಗರ ಪೊಲೀಸ್ ವತಿಯಿಂದ ಕೈಗೊಂಡಿರುವ ವಿಶೇಷ ಕಾರ್ಯಾಚರಣೆಯಡಿ, ಪಾದಚಾರಿಗಳಿಗೆ ಹಾಗೂ ಸಾರ್ವಜನಿಕರಿಗೆ ತೊಂದರೆಂಟು ಮಾಡುವ ಅಕ್ರಮ ಪಾರ್ಕಿಂಗ್ ವಿರುದ್ಧ ಭರ್ಜರಿ ಕಾರ್ಯಾಚರಣೆ ನಡೆದಿದೆ.
ಜೂನ್ 2026 ರಿಂದ ಈವರೆಗೆ No Parking, Footpath Parking, Wrong Parking, Double Parking ಸೇರಿದಂತೆ ಇತರೆ ನಿಯಮ ಉಲ್ಲಂಘನೆಗಳ ಒಟ್ಟು 7,490 ಪ್ರಕರಣಗಳನ್ನು ದಾಖಲಿಸಲಾಗಿದೆ.ಇದರಲ್ಲಿ ಪ್ರಮುಖವಾಗಿ ಫೂಟ್‌ಪಾತ್‌ಗಳ ಮೇಲೆ ವಾಹನಗಳನ್ನು ನಿಲ್ಲಿಸಿದ್ದ 1,080 ಪ್ರಕರಣಗಳು ಸೇರಿವೆ.ಈ ಕಾರ್ಯಾಚರಣೆಯ ಮೂಲಕ ಒಟ್ಟು ರೂ. 3,07,600/- ದಂಡವನ್ನು ವಸೂಲಿ ಮಾಡಲಾಗಿದೆ.ದೋಷಪೂರಿತ ನಂಬರ್ ಪ್ಲೇಟ್ ವಿರುದ್ಧ ವಿಶೇಷ ಕಾರ್ಯಾಚರಣೆ (Special Drive on Number Plates):
ಅಷ್ಟೇ ಅಲ್ಲದೆ, ನಕಲಿ ಹಾಗೂ ದೋಷಪೂರಿತ ನಂಬರ್ ಪ್ಲೇಟ್ ಬಳಸಿ ಅಪರಾಧ ಕೃತ್ಯ ಎಸಗುವುದನ್ನು ತಡೆಯಲು ಪೊಲೀಸರು ಆಗಸ್ಟ್ 4 ರಿಂದ ಆಗಸ್ಟ್ 12ರವರೆಗೆ ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ.
258 ದೋಷಪೂರಿತ ನಂಬರ್ ಪ್ಲೇಟ್ ವಾಹನಗಳು. ನಂಬರ್ ಪ್ಲೇಟ್ ಅಳವಡಿಸದೇ ಸಂಚರಿಸುತ್ತಿದ್ದ 74 ವಾಹನಗಳು. ಒಟ್ಟು 332 ಪ್ರಕರಣಗಳನ್ನು ದಾಖಲಿಸಿ, ರೂ. 3,01,000/- ದಂಡವನ್ನು ವಿಧಿಸಲಾಗಿದೆ.
ವಾಹನ ಮಾಲೀಕರು ತಮ್ಮ ವಾಹನಗಳಿಗೆ ನಿಯಮಾನುಸಾರ ಸ್ಪಷ್ಟವಾದ ನಂಬರ್ ಪ್ಲೇಟ್ ಹಾಗೂ ಹೆಚ್.ಎಸ್.ಅರ್.ಪಿ (HSRP) ನಂಬರ್ ಪ್ಲೇಟ್ ಕಡ್ಡಾಯವಾಗಿ ಅಳವಡಿಸಿಕೊಳ್ಳುವಂತೆ ಸೂಚಿಸಲಾಗಿದೆ. ಮಂಗಳೂರು ನಗರ ಪೊಲೀಸ್ ವತಿಯಿಂದ ಈ ವಿಶೇಷ ಕಾರ್ಯಾಚರಣೆಗಳು ಮುಂದೆಯೂ ಮುಂದುವರಿಯಲಿದ್ದು, ಸಾರ್ವಜನಿಕರು ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವ ಮೂಲಕ ಸುರಕ್ಷಿತ ಸಂಚಾರಕ್ಕೆ ಸಹಕರಿಸಬೇಕೆಂದು ಪೊಲೀಸ್ ಇಲಾಖೆ ಮನವಿ ಮಾಡಿದೆ.