BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ದಕ್ಷಿಣ ಕನ್ನಡ

Mangaluru Raging ಮಂಗಳೂರು: ಖಾಸಗಿ ಕಾಲೇಜು ವಿದ್ಯಾರ್ಥಿಗಳ ಮೇಲೆ ರ‍್ಯಾಗಿಂಗ್; ಪ್ರಕರಣ ದಾಖಲು



ಮಂಗಳೂರು,ಆಗಸ್ಟ್ 05:  ಇಬ್ಬರು ವಿದ್ಯಾರ್ಥಿಗಳ ಮೇಲೆ ಅದೇ ಕಾಲೇಜಿನ ದ್ವಿತೀಯ ವರ್ಷದ ವಿದ್ಯಾರ್ಥಿಗಳ ತಂಡ  ಹಲ್ಲೆ ನಡೆಸಿದ ಘಟನೆ ಮಂಗಳೂರು ನಗರದಲ್ಲಿ ಬೆಳಕಿಗೆ ಬಂದಿದೆ. ಖಾಸಗಿ ಕಾಲೇಜೊಂದರ ಪ್ರಥಮ ವರ್ಷದ ಈ ಇಬ್ಬರು ವಿದ್ಯಾರ್ಥಿಗಳ ಮೇಲೆ ಅದೇ ಕಾಲೇಜಿನ 4 ರಿಂದ 6 ಮಂದಿ ವಿದ್ಯಾರ್ಥಿಗಳು ಹಲ್ಲೆ ನಡೆಸಿದ್ದಾರೆ. ಪೊಲೀಸ್ ಮಾಹಿತಿ ಪ್ರಕಾರ ಮೇಲ್ನೋಟಕ್ಕೆ ಇದು ರ‍್ಯಾಗಿಂಗ್ ಪ್ರಕರಣದಂತೆಯೇ ಕಂಡುಬರುತ್ತಿದ್ದು ಈ ಬಗ್ಗೆ ತನಿಖೆ ಮುಂದುವರೆದಿದೆ. ಮಂಗಳೂರು ನಗರದ  ಗುಜ್ಜರಕೆರೆ ಸಮೀಪದ ಟೀ ಕ್ಯಾಂಟೀನ್ ಬಳಿ  ಈ ಘಟನೆ ನಡೆದಿದೆ. ತಂಡದ ಹಲ್ಲೆಯಿಂದ ಗಾಯಗೊಂಡ ಇಬ್ಬರು ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದುಪ್ರಕರಣದ ಕುರಿತು ತನಿಖೆ ಆರಂಭಿಸಿದ್ದಾರೆ. ಹಲ್ಲೆಗೆ ನಿಖರ ಕಾರಣವೇನು ಮತ್ತು ಪ್ರಕರಣ ರಾಗಿಂಗ್‌ಗೆ ಸಂಬಂಧಿಸಿದದ್ದೇ ಎಂಬ ಬಗ್ಗೆ ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸಲಾಗುತ್ತಿದೆ. 




📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!