BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ದಕ್ಷಿಣ ಕನ್ನಡ

Mangaluru Rain Damage ಮಂಗಳೂರಿನಲ್ಲಿ ಭಾರೀ ಮಳೆ-ಬಿರುಗಾಳಿ: ಗ್ಯಾರೇಜ್ ಮೇಲೆ ಮರ, ವಿದ್ಯುತ್ ಕಂಬ ಉರುಳಿ ಮೂರು ಕಾರುಗಳು ಜಖಂ


ಮಂಗಳೂರು,ಆಗಸ್ಟ್ 27:  ಮಂಗಳೂರು ನಗರದಲ್ಲಿ ಗುರುವಾರ ಮುಂಜಾನೆ ಸುರಿದ ಭಾರೀ ಗಾಳಿ-ಮಳೆಗೆ ಕೊಟ್ಟಾರ ಚೌಕಿ ಸಮೀಪ ಬೃಹತ್ ಗಾತ್ರದ ಮರ ಹಾಗೂ ವಿದ್ಯುತ್ ಕಂಬವೊಂದು ಗ್ಯಾರೇಜ್ ಮೇಲೆ ಮುರಿದು ಬಿದ್ದಿದ್ದು, ಪರಿಣಾಮ ಮೂರು ಚತುಷ್ಚಕ್ರ ವಾಹನಗಳು ಜಖಂಗೊಂಡು, ಕಟ್ಟಡಕ್ಕೂ ಅಪಾರ ಹಾನಿ ಸಂಭವಿಸಿದೆ. ಮುಂಜಾನೆ ಸುಮಾರು 2.15ರ ವೇಳೆಗೆ ತೀವ್ರ ಬಿರುಗಾಳಿ ಬೀಸಿದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಗ್ಯಾರೇಜ್‌ನ ಮೇಲ್ಭಾಗದಲ್ಲಿದ್ದ ವಾಚ್‌ಮನ್ ಕೊಠಡಿಯೂ ಸಂಪೂರ್ಣ ಹಾನಿಗೊಳಗಾಗಿದೆ. ಆದರೆ, ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

ಲಕ್ಷಾಂತರ ರೂ. ನಷ್ಟ: ಮರ ಹಾಗೂ ವಿದ್ಯುತ್ ಕಂಬ ಬಿದ್ದ ರಭಸಕ್ಕೆ ಗ್ಯಾರೇಜ್‌ನಲ್ಲಿದ್ದ ಮೂರು ವಾಹನಗಳು ನಜ್ಜುಗುಜ್ಜಾಗಿವೆ. ಕಟ್ಟಡ ಹಾಗೂ ವಾಹನಗಳ ಹಾನಿಯಿಂದ ಒಟ್ಟು ಸುಮಾರು 4 ರಿಂದ 5 ಲಕ್ಷ ರೂಪಾಯಿಗಳಷ್ಟು ನಷ್ಟ ಸಂಭವಿಸಿದೆ ಎಂದು ಕಟ್ಟಡದ ಮಾಲಕರು ಮಾಹಿತಿ ನೀಡಿದ್ದಾರೆ.

ಮೆಸ್ಕಾಂ ಕಾರ್ಯಾಚರಣೆ: ಘಟನೆಯಿಂದ ವಿದ್ಯುತ್ ಕಂಬ ಸಂಪೂರ್ಣ ಹಾನಿಗೊಂಡ ಹಿನ್ನೆಲೆಯಲ್ಲಿ ಮೆಸ್ಕಾಂ ಅಧಿಕಾರಿಗಳು ತಕ್ಷಣವೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮುನ್ನೆಚ್ಚರಿಕೆ ಕ್ರಮವಾಗಿ ಆ ಪ್ರದೇಶದ ವಿದ್ಯುತ್ ಸಂಪರ್ಕವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ ಅಧಿಕಾರಿಗಳು, ಬಳಿಕ ಯುದ್ಧೋಪಾದಿಯಲ್ಲಿ ಹೊಸ ವಿದ್ಯುತ್ ಕಂಬವನ್ನು ಅಳವಡಿಸಿ ಸ್ಥಳೀಯರಿಗೆ ವಿದ್ಯುತ್ ಸಂಪರ್ಕವನ್ನು ಯಶಸ್ವಿಯಾಗಿ ಮರು ಕಲ್ಪಿಸಿದರು.

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!