BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ದಕ್ಷಿಣ ಕನ್ನಡ

Mangaluru Sunday Bazar Conflict ಮಂಗಳೂರು ಸಂಡೆ ಬಜಾರ್ ಸಂಘರ್ಷ: ಬಿ.ಕೆ. ಇಮ್ತಿಯಾಜ್ ವಿರುದ್ಧದ FIR ಗೆ ಹೈಕೋರ್ಟ್ ತಡೆ..!

ಸುಪ್ರೀಂ ಕೋರ್ಟ್ ಆದೇಶದ ತಪ್ಪು ವ್ಯಾಖ್ಯಾನ ಮಾಡಿ ಬೀದಿ ಬದಿ ವ್ಯಾಪಾರಸ್ಥರನ್ನು ತೆರವು ಮಾಡುತ್ತಿದ್ದ ರಾಜ್ಯ ಸರ್ಕಾರ ಮತ್ತು ಮಂಗಳೂರು ಮಹಾನಗರ ಪಾಲಿಕೆಗೆ ಕರ್ನಾಟಕ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.

ಮಂಗಳೂರು, ಆಗಸ್ಟ್ 25: ಸುಪ್ರೀಂ ಕೋರ್ಟ್ ಆದೇಶದ ತಪ್ಪು ವ್ಯಾಖ್ಯಾನ ಮಾಡಿ ಬೀದಿ ಬದಿ ವ್ಯಾಪಾರಸ್ಥರನ್ನು ತೆರವು ಮಾಡುತ್ತಿದ್ದ ರಾಜ್ಯ ಸರ್ಕಾರ ಮತ್ತು ಮಂಗಳೂರು ಮಹಾನಗರ ಪಾಲಿಕೆಗೆ ಕರ್ನಾಟಕ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಅಲ್ಲದೆ, ಸಂಡೆ ಬಜಾರ್ ತೆರವು ವಿರೋಧಿಸಿ ಹೋರಾಟ ನಡೆಸಿದ್ದ ಸಿಐಟಿಯು ದ.ಕ. ಜಿಲ್ಲಾ ಬೀದಿ ಬದಿ ವ್ಯಾಪಾರಸ್ಥರ ಸಂಘದ ಕಾರ್ಯಾಧ್ಯಕ್ಷ ಬಿ.ಕೆ. ಇಮ್ತಿಯಾಜ್ ಹಾಗೂ ಇತರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

  • ಸುಪ್ರೀಂ ಕೋರ್ಟ್ ಆದೇಶದ ಸ್ಪಷ್ಟನೆ: "ಯಾವುದೇ ಬೀದಿ ಬದಿ ವ್ಯಾಪಾರಸ್ಥರನ್ನು ತೆರವುಗೊಳಿಸಲು ಸುಪ್ರೀಂ ಕೋರ್ಟ್ ನೇರವಾಗಿ ಆದೇಶಿಸಿಲ್ಲ. ರಸ್ತೆ ನಿರ್ಮಿಸುವಾಗ ಸೂಕ್ತ ಫುಟ್‌ಪಾತ್‌ ನಿರ್ಮಿಸಬೇಕು ಎಂದಷ್ಟೇ ತಿಳಿಸಲಾಗಿದೆ. ಬೀದಿ ಬದಿ ವ್ಯಾಪಾರಸ್ಥರ ಬದುಕುವ ಹಕ್ಕು ಮತ್ತು ಹಿತರಕ್ಷಣಾ ಕಾಯ್ದೆಯನ್ನು ರಾಜ್ಯ ಸರ್ಕಾರ ಕಡ್ಡಾಯವಾಗಿ ಪಾಲಿಸಬೇಕು" ಎಂದು ಹೈಕೋರ್ಟ್ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ಸ್ಪಷ್ಟಪಡಿಸಿದ್ದಾರೆ.

  • ಪ್ರಕರಣದ ಹಿನ್ನೆಲೆ: ಮಂಗಳೂರು ಟೌನ್ ಹಾಲ್ ಸಮೀಪದ ಪಾದಚಾರಿ ಮಾರ್ಗದ ಬಳಿ ಇದ್ದ ಸಂಡೆ ಬಜಾರ್ ಬೀದಿ ವ್ಯಾಪಾರಿಗಳ ತಾತ್ಕಾಲಿಕ ಅಂಗಡಿಗಳನ್ನು ಯಾವುದೇ ನೋಟಿಸ್ ನೀಡದೆ ತೆರವುಗೊಳಿಸಲಾಗುತ್ತಿತ್ತು. ಇದನ್ನು ಪ್ರಶ್ನಿಸಿ ಸ್ಥಳದಲ್ಲಿ ಮನವಿ ಮಾಡಲು ತೆರಳಿದ್ದ ಬಿ.ಕೆ. ಇಮ್ತಿಯಾಜ್ ಹಾಗೂ ಪದಾಧಿಕಾರಿಗಳ ಮೇಲೆ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಾಗೂ ಹಲ್ಲೆ ಆರೋಪದಡಿ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು.

  • ಹಿರಿಯ ವಕೀಲರ ವಾದ: ಅರ್ಜಿದಾರರ ಪರವಾಗಿ ಹಿರಿಯ ವಕೀಲ ಎಸ್. ಬಾಲನ್ ಹಾಗೂ ವಕೀಲೆ ರಕ್ಷಿತಾ ಸಿಂಗ್ ವಾದ ಮಂಡಿಸಿ, "ಇದು ನೈಸರ್ಗಿಕ ನ್ಯಾಯದ ತತ್ವ ಹಾಗೂ 2014ರ ಬೀದಿ ವ್ಯಾಪಾರಿಗಳ ಕಾಯ್ದೆಯ ಉಲ್ಲಂಘನೆಯಾಗಿದೆ. ಸುಪ್ರೀಂ ಕೋರ್ಟ್ ತೀರ್ಪಿನ ತಪ್ಪು ವ್ಯಾಖ್ಯಾನದಿಂದ ಬಡ ವ್ಯಾಪಾರಿಗಳ ಮೇಲೆ ದೌರ್ಜನ್ಯ ಎಸಗಲಾಗಿದೆ" ಎಂದು ವಿವರಿಸಿದರು. ವಾದವನ್ನು ಆಲಿಸಿದ ನ್ಯಾಯಾಲಯವು ಎಫ್‌ಐಆರ್‌ಗೆ ತಡೆ ನೀಡುವುದರೊಂದಿಗೆ ರಾಜ್ಯಾದ್ಯಂತದ ಬೀದಿ ವ್ಯಾಪಾರಿಗಳಿಗೆ ದೊಡ್ಡ ಮಟ್ಟದ ಕಾನೂನು ನೆರವು ಹಾಗೂ ನಿರಾಳತೆ ದೊರೆತಂತಾಗಿದೆ.

ಹೈ ಕೋರ್ಟ್ ತೀರ್ಪು ಸ್ವಾಗತಾರ್ಹ;ಬಿ.ಕೆ. ಇಮ್ತಿಯಾಜ್
ಸುಪ್ರೀಂ ಕೋರ್ಟ್ ತೀರ್ಪನ್ನು ತಪ್ಪಾಗಿ ವ್ಯಾಖ್ಯಾನ ಮಾಡಿ ಸಂಡೆ ಬಜಾರ್ ವ್ಯಾಪಾರಿಗಳಿಗೆ ಕಳೆದ 3ತಿಂಗಳಿಂದ ನಿರಂತರ ದೌರ್ಜನ್ಯ ನಡೆಸಿ ಸಂಡೆ ಬಜಾರ್ ವ್ಯಾಪಾರಿಗಳ ಬದುಕನ್ನು ಸಂಕಷ್ಟಕ್ಕೆ ತಳ್ಳಲಾಗಿದೆ. ಹೈ ಕೋರ್ಟ್ ಆದೇಶ ಮಂಗಳೂರಿನ ಸಂಡೆ ಬಜಾರ್ ವ್ಯಾಪಾರಿಗಳಿಗೆ ಮಾತ್ರವಲ್ಲ ಇಡೀ ರಾಜ್ಯದ ಬೀದಿ ವ್ಯಾಪಾರಿಗಳಿಗೆ ಅನುಕೂಲ ಆಗಲಿದೆ. ಹೈ ಕೋರ್ಟಿನಲ್ಲಿ ಬೀದಿಬದಿ ವ್ಯಾಪಾರಿಗಳ ಪರ ವಾದಿಸಿದ ಹಿರಿಯ ವಕೀಲರಾದ ಎಸ್ ಬಾಲನ್, ರಕ್ಷಿತಾ ಸಿಂಗ್ ಹಾಗೂ ಸಹಕರಿಸಿದ ಮಂಗಳೂರಿನ ಯುವ ವಕೀಲರಾದ ಚರಣ್ ಶೆಟ್ಟಿ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಬಿ.ಕೆ ಇಮ್ತಿಯಾಜ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!