Mangaluru : ವೆನ್ಲಾಕ್ ಆಸ್ಪತ್ರೆಯಿಂದ ಪೊಕ್ಸೋ ಪ್ರಕರಣದ ವಿಚಾರಣಾಧೀನ ಕೈದಿ ಪರಾರಿ
ಸುದ್ದಿವಾಣಿ
8/03/2026 10:07:00 AM
ಮಂಗಳೂರು, ಆಗಸ್ಟ್ 03:ಮಂಗಳೂರು ನಗರದ ವೆನ್ಲಾಕ್ ಆಸ್ಪತ್ರೆಯ ಬಂಧಿ ಕೊಠಡಿಯಿಂದ ಪೊಕ್ಸೊ ಪ್ರಕರಣದ ವಿಚಾರಣಾಧೀನ ಕೈದಿ ಪರಾರಿಯಾಗಿದ್ದಾನೆ. ರೋಶನ್ ಫೆರ್ನಾಂಡಿಸ್ ಪರಾರಿಯಾದ ಆರೋಪಿಯಾಗಿದ್ದಾನೆ. ಬೆಳ್ತಂಗಡಿಯ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ದಾಖಲಾದ ಪೊಕ್ಸೊ ಪ್ರಕರಣದಲ್ಲಿ ಆರೋಪಿ ರೋಶನ್ ಫೆರ್ನಾಂಡಿನ್ ನನ್ನು ಚಿಕಿತ್ಸೆಗಾಗಿ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಬಂಧಿ ಕೊಠಡಿಗೆ ಭದ್ರತೆಗೆ ನಿಯೋಜಿಸಲಾಗಿದ್ದ ಪೊಲೀಸರ ಕಣ್ತಪ್ಪಿಸಿ ರವಿವಾರ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ. ಮೂಡುಬಿದಿರೆ ತಾಲೂಕಿನ ವಿಶಾಲನಗರದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಈತನ ವಿರುದ್ಧ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಪರಾರಿಯಾಗಿದ್ದ ಕೈದಿಯ ಪತ್ತೆ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ.
ಟ್ಯಾಗ್ಗಳು:
ದಕ್ಷಿಣ ಕನ್ನಡ