BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ದಕ್ಷಿಣ ಕನ್ನಡ

Mangaluru ಮಂಗಳೂರಿನ ಅತ್ತಾವರದಲ್ಲಿ ಲಿಫ್ಟ್ ಜ್ಯಾಮ್, ವೃದ್ದರು ಸೇರಿ ಮೂವರ ರಕ್ಷಣೆ


ಮಂಗಳೂರು, ಆಗಸ್ಟ್ 15 :ಮಂಗಳೂರು ನಗರದ ಅತ್ತಾವರದಲ್ಲಿರುವ ಹೋಟೆಲ್ ಪ್ಯಾರಡೈಸ್‌ನಲ್ಲಿ ಇಂದು ಆತಂಕದ ಕ್ಷಣಗಳು ನಿರ್ಮಾಣವಾಗಿದ್ದವು. ಹೋಟೆಲ್‌ನ ಲಿಫ್ಟ್ ತಾಂತ್ರಿಕ ದೋಷದಿಂದ ಜ್ಯಾಮ್ ಆದ ಕಾರಣ, ಒಳಗೆ ಸಿಲುಕಿಕೊಂಡಿದ್ದ ಮೂವರು ವ್ಯಕ್ತಿಗಳನ್ನು ಪಾಂಡೇಶ್ವರ ಅಗ್ನಿಶಾಮಕ ದಳದ ಸಿಬ್ಬಂದಿ ಯಶಸ್ವಿಯಾಗಿ ರಕ್ಷಿಸಿದ್ದಾರೆ. ಹೋಟೆಲ್‌ನಲ್ಲಿ ಅಳವಡಿಸಲಾಗಿದ್ದ ಲಿಫ್ಟ್‌ನಲ್ಲಿ ಮೂವರು ವ್ಯಕ್ತಿಗಳು ತೆರಳುತ್ತಿದ್ದಾಗ ಹಠಾತ್ ತಾಂತ್ರಿಕ ದೋಷದಿಂದ ಅದು ಮಧ್ಯದಲ್ಲೇ ಸ್ಥಗಿತಗೊಂಡಿದೆ.  ಲಿಫ್ಟ್ ಒಳಗೆ ಸಿಲುಕಿಕೊಂಡ ಮೂವರು ಹೊರಬರಲಾಗದೆ ಪರದಾಡಿದ್ದಾರೆ. ಕೂಡಲೇ ಹೋಟೆಲ್ ಸಿಬ್ಬಂದಿ ಹಾಗೂ ಸಾರ್ವಜನಿಕರು ತುರ್ತು ಸಹಾಯಕ್ಕಾಗಿ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ.

ಮಾಹಿತಿ ತಿಳಿದ ತಕ್ಷಣವೇ ಕಾರ್ಯಪ್ರವೃತ್ತರಾದ ಪಾಂಡೇಶ್ವರ ಅಗ್ನಿಶಾಮಕ ದಳದ (Pandeshwara Fire Station) ಸಿಬ್ಬಂದಿ ಕ್ಷಿಪ್ರವಾಗಿ ಸ್ಥಳಕ್ಕೆ ಧಾವಿಸಿದ್ದಾರೆ.

ಅತ್ಯಂತ ಎಚ್ಚರಿಕೆಯಿಂದ ಹಾಗೂ ಸಕಾಲಿಕ ಕಾರ್ಯಾಚರಣೆ ನಡೆಸಿದ ಅಗ್ನಿಶಾಮಕ ಸಿಬ್ಬಂದಿ, ಲಿಫ್ಟ್‌ನ ಬಾಗಿಲು ತೆರೆದು ಒಳಗೆ ಸಿಲುಕಿದ್ದ ಮೂವರನ್ನು ಸುರಕ್ಷಿತವಾಗಿ ಹೊರತೆಗೆದಿದ್ದಾರೆ.

ಸಕಾಲದಲ್ಲಿ ಕಾರ್ಯಪ್ರವೃತ್ತರಾದ ಅಗ್ನಿಶಾಮಕ ದಳದ ಸಮಯಸ್ಫೂರ್ತಿಯಿಂದ ದೊಡ್ಡ ಅಪಾಯವೊಂದು ತಪ್ಪಿದಂತಾಗಿದ್ದು, ಲಿಫ್ಟ್‌ನಲ್ಲಿದ್ದ ಮೂವರು ಯಾವುದೇ ಗಾಯಗಳಿಲ್ಲದೆ ಸುರಕ್ಷಿತವಾಗಿ ಪಾರಾಗಿದ್ದಾರೆ. ಹೋಟೆಲ್ ಆಡಳಿತ ಮಂಡಳಿಯ ನಿರ್ಲಕ್ಷ್ಯವೇ ಇದಕ್ಕೆ ಕಾರಣವೇ ಎಂಬ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ.

https://youtube.com/shorts/5JteQcVixG0?feature=share

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!