ಮಂಗಳೂರು,ಆಗಸ್ಟ್ 08 :ಸ್ವಾತಂತ್ರ್ಯ ದಿನಾಚರಣೆ, ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್ ಧ್ವಜಗಳ ಬಳಕೆಯನ್ನು ನಿಷೇಧಿಸಲಾಗಿದೆ. ಭಾರತ ಸರ್ಕಾರದ ಗೃಹ ಮಂತ್ರಾಲಯವು ಎಲ್ಲಾ ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಿದ್ದು, ರಾಷ್ಟ್ರೀಯ ಗೌರವ ಕಾಯ್ದೆ, 1971 ಮತ್ತು ಭಾರತದ ಧ್ವಜ ಸಂಹಿತೆ 2002 ರಡಿ (2021 ಮತ್ತು 2022ರ ತಿದ್ದುಪಡಿಗಳೊಂದಿಗೆ) ಎಲ್ಲಾ ಸರ್ಕಾರಿ ಸಂಸ್ಥೆಗಳು, ಖಾಸಗಿ ಸಂಸ್ಥೆಗಳು ಮತ್ತು ಸಾರ್ವಜನಿಕರು ಪ್ರಮುಖ ರಾಷ್ಟ್ರೀಯ ಸಾಂಸ್ಕøತಿಕ ಮತ್ತು ಕ್ರೀಡಾಕೂಟಗಳ ಸಂದರ್ಭಗಳಲ್ಲಿ ಪ್ಲಾಸ್ಟಿಕ್‍ನಿಂದ ತಯಾರಿಸಿದ ರಾಷ್ಟ್ರೀಯ ಧ್ವಜಗಳನ್ನು ಬಳಸದಂತೆ ಸೂಚಿಸಲಾಗಿದೆ. ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭಗಳಲ್ಲಿ ನಿಷೇಧಿತ ಪ್ಲಾಸ್ಟಿಕ್ ಧ್ವಜವನ್ನು (ಪ್ಲಾಸ್ಟಿಕ್ ಕಡ್ಡಿ ಸಹಿತ ಪ್ಲಾಸ್ಟಿಕ್ ಧ್ವಜ) ಬಳಸದಂತೆ ಕೇವಲ ಪ್ಲಾಸ್ಟಿಕ್ ಬಾವುಟಗಳನ್ನು ಬಳಸುವ ಬದಲು ಕಾಗದ ಮತ್ತು ಬಟ್ಟೆಗಳಿಂದ ತಯಾರಿಸಿದ ಬಾವುಟಗಳನ್ನು (ಮರದ ಕಡ್ಡಿ / ಪೇಪರ್ ಕಡ್ಡಿ ಸಹಿತ ಕಾಗದ/ಬಟ್ಟೆಯ ಧ್ವಜ) ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳನ್ನು (ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್, ಪ್ಲಾಸ್ಟಿಕ್ ಭಿತ್ತಿಪತ್ರ, ಪ್ಲಾಸ್ಟಿಕ್ ತೋರಣ, ಪ್ಲೆಕ್ಸ್, ಬಾವುಟ, ಪ್ಲಾಸ್ಟಿಕ್ ತಟ್ಟೆ, ಪ್ಲಾಸ್ಟಿಕ್ ಲೋಟ, ಪ್ಲಾಸ್ಟಿಕ್ ಚಮಚ, ಸ್ಟ್ರಾಗಳು, 01 - 20 ಕ್ಲಿಂಗ್ ಫಿಲ್ಡ್ ಮತ್ತು ಊಟದ ಮೇಜಿನ ಮೇಲೆ ಹರಡುವ ಪ್ಲಾಸ್ಟಿಕ್ ಹಾಳೆ ಹಾಗೂ ಥರ್ಮೋಕಾಲ್ ಮತ್ತು ಪ್ಲಾಸ್ಟಿಕ್ ಮೈಕ್ರೋ ಬೀಡ್ಸ್‍ನಿಂದ ತಯಾರಾದಂತಹ ವಸ್ತುಗಳು) ಬಳಸದಂತೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪರಿಸರ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Mangaluru ಸ್ವಾತಂತ್ರ್ಯ ದಿನಾಚರಣೆ, ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್ ಧ್ವಜಗಳ ಬಳಕೆಗೆ ನಿಷೇಧ
ಸುದ್ದಿವಾಣಿ
8/08/2026 09:10:00 PM
ಮಂಗಳೂರು,ಆಗಸ್ಟ್ 08 :ಸ್ವಾತಂತ್ರ್ಯ ದಿನಾಚರಣೆ, ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್ ಧ್ವಜಗಳ ಬಳಕೆಯನ್ನು ನಿಷೇಧಿಸಲಾಗಿದೆ. ಭಾರತ ಸರ್ಕಾರದ ಗೃಹ ಮಂತ್ರಾಲಯವು ಎಲ್ಲಾ ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಿದ್ದು, ರಾಷ್ಟ್ರೀಯ ಗೌರವ ಕಾಯ್ದೆ, 1971 ಮತ್ತು ಭಾರತದ ಧ್ವಜ ಸಂಹಿತೆ 2002 ರಡಿ (2021 ಮತ್ತು 2022ರ ತಿದ್ದುಪಡಿಗಳೊಂದಿಗೆ) ಎಲ್ಲಾ ಸರ್ಕಾರಿ ಸಂಸ್ಥೆಗಳು, ಖಾಸಗಿ ಸಂಸ್ಥೆಗಳು ಮತ್ತು ಸಾರ್ವಜನಿಕರು ಪ್ರಮುಖ ರಾಷ್ಟ್ರೀಯ ಸಾಂಸ್ಕøತಿಕ ಮತ್ತು ಕ್ರೀಡಾಕೂಟಗಳ ಸಂದರ್ಭಗಳಲ್ಲಿ ಪ್ಲಾಸ್ಟಿಕ್‍ನಿಂದ ತಯಾರಿಸಿದ ರಾಷ್ಟ್ರೀಯ ಧ್ವಜಗಳನ್ನು ಬಳಸದಂತೆ ಸೂಚಿಸಲಾಗಿದೆ. ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭಗಳಲ್ಲಿ ನಿಷೇಧಿತ ಪ್ಲಾಸ್ಟಿಕ್ ಧ್ವಜವನ್ನು (ಪ್ಲಾಸ್ಟಿಕ್ ಕಡ್ಡಿ ಸಹಿತ ಪ್ಲಾಸ್ಟಿಕ್ ಧ್ವಜ) ಬಳಸದಂತೆ ಕೇವಲ ಪ್ಲಾಸ್ಟಿಕ್ ಬಾವುಟಗಳನ್ನು ಬಳಸುವ ಬದಲು ಕಾಗದ ಮತ್ತು ಬಟ್ಟೆಗಳಿಂದ ತಯಾರಿಸಿದ ಬಾವುಟಗಳನ್ನು (ಮರದ ಕಡ್ಡಿ / ಪೇಪರ್ ಕಡ್ಡಿ ಸಹಿತ ಕಾಗದ/ಬಟ್ಟೆಯ ಧ್ವಜ) ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳನ್ನು (ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್, ಪ್ಲಾಸ್ಟಿಕ್ ಭಿತ್ತಿಪತ್ರ, ಪ್ಲಾಸ್ಟಿಕ್ ತೋರಣ, ಪ್ಲೆಕ್ಸ್, ಬಾವುಟ, ಪ್ಲಾಸ್ಟಿಕ್ ತಟ್ಟೆ, ಪ್ಲಾಸ್ಟಿಕ್ ಲೋಟ, ಪ್ಲಾಸ್ಟಿಕ್ ಚಮಚ, ಸ್ಟ್ರಾಗಳು, 01 - 20 ಕ್ಲಿಂಗ್ ಫಿಲ್ಡ್ ಮತ್ತು ಊಟದ ಮೇಜಿನ ಮೇಲೆ ಹರಡುವ ಪ್ಲಾಸ್ಟಿಕ್ ಹಾಳೆ ಹಾಗೂ ಥರ್ಮೋಕಾಲ್ ಮತ್ತು ಪ್ಲಾಸ್ಟಿಕ್ ಮೈಕ್ರೋ ಬೀಡ್ಸ್‍ನಿಂದ ತಯಾರಾದಂತಹ ವಸ್ತುಗಳು) ಬಳಸದಂತೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪರಿಸರ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟ್ಯಾಗ್ಗಳು:
ದಕ್ಷಿಣ ಕನ್ನಡ