ಮಂಗಳೂರು, ಆಗಸ್ಟ್ 15 : ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮಕ್ಕೆ ಸಮಯದ ಕೊರತೆಯಿಂದ ಹಾಜರಾಗಲು ಸಾಧ್ಯವಿಲ್ಲ ಎಂದಿರುವ ಸಚಿವ ಜಮೀರ್ ಅಹಮದ್ ಖಾನ್ ಅವರ ಹೇಳಿಕೆ ದೇಶಕ್ಕೆ ಮಾಡಿದ ಅಪಚಾರ ಎಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಕಟುವಾಗಿ ಖಂಡಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಅವರು ಸಂವಿಂಧಾನದ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಸಚಿವರು ಸ್ವಾತಂತ್ರ್ಯ ದಿನಾಚರಣೆಗೆ ಸಮಯವಿಲ್ಲದಿರುವುದು ಹಾಸ್ಯಾಸ್ಪದ ಹಾಗೂ ಕರ್ನಾಟಕವೇ ತಲೆತಗ್ಗಿಸುವಂಥದ್ದು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಮೀರ್ ಅಹಮದ್ ಖಾನ್ ಅವರ ಮನವಿಯನ್ನು ಮನ್ನಿಸಿ ಬದಲಿ ವ್ಯವಸ್ಥೆ ಮಾಡುವ ಬದಲು, ಮುಖ್ಯಮಂತ್ರಿಗಳು ಅವರನ್ನು ತಕ್ಷಣವೇ ಸಂಪುಟದಿಂದ ವಜಾಗೊಳಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
Mangaluru ಜಮೀರ್ ಅಹಮದ್ ಖಾನ್ ಅವರನ್ನು ಸಂಪುಟದಿಂದ ವಜಾ ಮಾಡಿ: ಕ್ಯಾಪ್ಟನ್ ಬ್ರಿಜೇಶ್ ಚೌಟ ಆಗ್ರಹ
ಸುದ್ದಿವಾಣಿ
8/15/2026 05:50:00 PM
ಮಂಗಳೂರು, ಆಗಸ್ಟ್ 15 : ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮಕ್ಕೆ ಸಮಯದ ಕೊರತೆಯಿಂದ ಹಾಜರಾಗಲು ಸಾಧ್ಯವಿಲ್ಲ ಎಂದಿರುವ ಸಚಿವ ಜಮೀರ್ ಅಹಮದ್ ಖಾನ್ ಅವರ ಹೇಳಿಕೆ ದೇಶಕ್ಕೆ ಮಾಡಿದ ಅಪಚಾರ ಎಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಕಟುವಾಗಿ ಖಂಡಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಅವರು ಸಂವಿಂಧಾನದ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಸಚಿವರು ಸ್ವಾತಂತ್ರ್ಯ ದಿನಾಚರಣೆಗೆ ಸಮಯವಿಲ್ಲದಿರುವುದು ಹಾಸ್ಯಾಸ್ಪದ ಹಾಗೂ ಕರ್ನಾಟಕವೇ ತಲೆತಗ್ಗಿಸುವಂಥದ್ದು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಮೀರ್ ಅಹಮದ್ ಖಾನ್ ಅವರ ಮನವಿಯನ್ನು ಮನ್ನಿಸಿ ಬದಲಿ ವ್ಯವಸ್ಥೆ ಮಾಡುವ ಬದಲು, ಮುಖ್ಯಮಂತ್ರಿಗಳು ಅವರನ್ನು ತಕ್ಷಣವೇ ಸಂಪುಟದಿಂದ ವಜಾಗೊಳಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಟ್ಯಾಗ್ಗಳು:
ದಕ್ಷಿಣ ಕನ್ನಡ
ರಾಜ್ಯ