BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ದಕ್ಷಿಣ ಕನ್ನಡ

Mangaluru ಮಂಗಳೂರು: ಆರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಮಹಿಳಾ ಪೊಲೀಸರ ವಶಕ್ಕೆ


ಮಂಗಳೂರು, ಆಗಸ್ಟ್11 :  ಮಂಗಳೂರು ಮಹಿಳಾ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಜಂಟಿ ಕಾರ್ಯಾಚರಣೆ ನಡೆಸಿ, ಕಳೆದ ಆರು ವರ್ಷಗಳಿಂದ ಪೊಲೀಸರ ಕಣ್ಣು ತಪ್ಪಿಸಿ ಓಡಾಡುತ್ತಿದ್ದ ಪೋಕ್ಸೋ ಮತ್ತು ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿಯೊಬ್ಬನನ್ನು ದಸ್ತಗಿರಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಯನ್ನು ಮಂಗಳೂರು ತಾಲೂಕಿನ ವಾಮಂಜೂರು ಸಮೀಪದ ಗುರುಪುರ ಉಳಾಯಿಬೆಟ್ಟಿನ ಸಲ್ಲಗೆ ಹೌಸ್ ನಿವಾಸಿ, ಸೂಪಿ ಇಬ್ರಾಹಿಂ ಎಂಬುವವರ ಪುತ್ರ ಮೊಹಮ್ಮದ್ ಇಮ್ರಾನ್ (36 ವರ್ಷ) ಎಂದು ಗುರುತಿಸಲಾಗಿದೆ. ಈತನ ವಿರುದ್ಧ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ 2020ರಲ್ಲಿ ದಾಖಲಾಗಿದ್ದ ಅಪರಾಧ ಸಂಖ್ಯೆ 10/2020, ಕಲಂ 376 (ಅತ್ಯಾಚಾರ) ಮತ್ತು 506 (ಜೀವಬೆದರಿಕೆ) ಐಪಿಸಿ ಹಾಗೂ ಮಾನ್ಯ ನ್ಯಾಯಾಲಯದ ಸಿ. ಸಿ ನಂಬರ್ 2225/2021 ಪ್ರಕರಣದಲ್ಲಿ ವಾರೆಂಟ್ ಜಾರಿಯಾಗಿತ್ತು. ಸುಮಾರು ಆರು ವರ್ಷಗಳಿಂದ ಈತ ತಲೆಮರೆಸಿಕೊಂಡಿದ್ದನು.ನ್ಯಾಯಾಂಗ ಬಂಧನ:ಬಂಧಿತ ಆರೋಪಿಯನ್ನು ಮಂಗಳೂರು ಮಹಿಳಾ ಠಾಣೆಯ ಪೊಲೀಸರು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಗೆ ದಿನಾಂಕ 24-08-2026 ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.

ಇತರ ಠಾಣೆಗಳಲ್ಲೂ ವಾರೆಂಟ್ ಬಾಕಿ:

ಪೊಲೀಸ್ ಮೂಲಗಳ ಪ್ರಕಾರ, ಬಂಧಿತ ಆರೋಪಿ ಮೊಹಮ್ಮದ್ ಇಮ್ರಾನ್ ವಿರುದ್ಧ ಇನ್ನು ಹಲವು ಗಂಭೀರ ಪ್ರಕರಣಗಳು ದಾಖಲಾಗಿವೆ. ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಅಪರಾಧ ಸಂಖ್ಯೆ 16/2020 (ಕಲಂ 342, 363 ಐಪಿಸಿ ಮತ್ತು 12 ಪೋಕ್ಸೋ ಕಾಯ್ದೆ) ಹಾಗೂ ಕಂಕನಾಡಿ ನಗರ ಪೊಲೀಸ್ ಠಾಣೆಯ ಅಪರಾಧ ಸಂಖ್ಯೆ 149/2012 (ಕಲಂ 384, 34 ಐಪಿಸಿ) ಪ್ರಕರಣಗಳಲ್ಲೂ ಈತನ ವಿರುದ್ಧ ವಾರೆಂಟ್‌ಗಳು ಬಾಕಿ ಇರುವುದು ಬೆಳಕಿಗೆ ಬಂದಿದೆ.ಸದ್ಯ ಆರೋಪಿಯನ್ನು ಜೈಲಿಗಟ್ಟಿರುವ ಪೊಲೀಸರು, ಉಳಿದ ಪ್ರಕರಣಗಳ ಕುರಿತಾಗಿಯೂ ಮುಂದಿನ ಕಾನೂನು ಕ್ರಮ ಕೈಗೊಳ್ಳುತ್ತಿದ್ದಾರೆ.


📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!