BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ದಕ್ಷಿಣ ಕನ್ನಡ

Mangaluru ಮಂಗಳೂರು : ಕುಂಬಾರ ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ಧ - ಡಾ. ಶ್ರೀನಿವಾಸ್ ವೇಲು


ಮಂಗಳೂರು,ಆಗಸ್ಟ್ 29 : ಕುಂಬಾರ ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಬದ್ಧವಾಗಿದ್ದು, ಸಮಾಜದ ಅಭಿವೃದ್ಧಿಗಾಗಿ ದೊರೆಯುವ ವಿವಿಧ ಯೋಜನೆಗಳು ಹಾಗೂ ಸೌಲಭ್ಯಗಳನ್ನು ಪರಿಣಾಮಕಾರಿಯಾಗಿ ತಲುಪಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಲಾಗುವುದು ಎಂದು ರಾಜ್ಯ ಕುಂಬಾರ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ. ಶ್ರೀನಿವಾಸ್ ವೇಲು ಹೇಳಿದ್ದಾರೆ.

ಶನಿವಾರ ನಗರದ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಭವನಕ್ಕೆ ಭೇಟಿ ನೀಡಿ, ಕುಂಬಾರ ಸಮಾಜದ ಕಾಂಗ್ರೆಸ್ ಕಾರ್ಯಕರ್ತರ ಅಹವಾಲು ಸ್ವೀಕರಿಸಿ ಅವರು ಮಾತನಾಡಿದರು. ಕುಂಬಾರ ಸಮಾಜದ ಸಮಸ್ಯೆ ಮತ್ತು ಬೇಡಿಕೆಗಳನ್ನು ಹಂತ ಹಂತವಾಗಿ ಸರ್ಕಾರದ ಗಮನಕ್ಕೆ ತಂದು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.



 ಸಮಾಜದ ನಿಷ್ಠಾವಂತ ಕಾರ್ಯಕರ್ತರಿಗೆ ಪಕ್ಷದಲ್ಲಿ ಸೂಕ್ತ ಅವಕಾಶಗಳು ದೊರೆಯಲಿವೆ ಎಂದ ಅವರು, ಸಮಾಜದ ಅಭಿವೃದ್ಧಿ ಮತ್ತು ಪಕ್ಷದ ಸಂಘಟನೆ ಬಲಪಡಿಸುವ ನಿಟ್ಟಿನಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. ಈ ಸಂದರ್ಭದಲ್ಲಿ ಸದಾಶಿವ ಬಂಗೇರ ಬಂಟ್ವಾಳ, ಸುಧಾಕರ್ ಕುಲಾಲ್, ಮಹೇಶ್ ಕೋಡಿಕಲ್, ಶ್ರೀನಿವಾಸ್ ಬೊಂದೇಲ್, ಸದಾನಂದ, ಸದಾಶಿವ ಕುಲಾಲ್ ಪಾಂಡೇಶ್ವರ, ಜಯಶೀಲ ಅಡ್ಯಂತಾಯ, ಚಂದ್ರಕಲಾ ಜೋಗಿ, ನ್ಯಾನ್ಸಿ ನೊರೊನ್ಹಾ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ತೇಜಸ್ವಿ ರಾಜ್ ವಂದಿಸಿದರು.


📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!