BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ದಕ್ಷಿಣ ಕನ್ನಡ

Mangaluru ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಆಶ್ರಯದಲ್ಲಿ ನಾರಾಯಣ ಗುರು ಜಯಂತಿ ಆಚರಣೆ


ಮಂಗಳೂರು, ಆಗಸ್ಟ್ 29 : ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುವರ್ಯರ 172ನೇ ಜನ್ಮ ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಯಿತು. 

ಈ ಕಾರ್ಯಕ್ರಮವನ್ನು ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿಯ ಅಧ್ಯಕ್ಷರಾದ ಸತೀಶ್ ಕುಂಪಲ ಅವರು ದೀಪ ಬೆಳಗುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಓಬಿಸಿ ಜಿಲ್ಲಾಧ್ಯಕ್ಷರಾದ ಮಹೇಶ್ ಜೋಗಿ ಯವರು ಪ್ರಾರಂಭದಲ್ಲಿ ಸ್ವಾಗತಿಸಿ, ಅಧ್ಯಕ್ಷತೆಯನ್ನು ವಹಿಸಿದರು. ಮುಖ್ಯ ಅತಿಥಿಗಳಾಗಿ ಮಂಗಳೂರು ದಕ್ಷಿಣ ಶಾಸಕರಾದ ಡಿ.ವೇದವ್ಯಾಸ್ ಕಾಮತ್ ಅವರು ಈ ಹಿಂದೆ ಕರ್ನಾಟಕದಲ್ಲಿ ಬಿಜೆಪಿ ಸರಕಾರ ನಾರಾಯಣ ಗುರು ನಿಗಮವನ್ನು ಸ್ಥಾಪಿಸುವ ಮೂಲಕ, ಮಂಗಳೂರಿನಲ್ಲಿ ನಾರಾಯಣ ಗುರು ವೃತ್ತ ನಿರ್ಮಾಣ ಮಾಡುವುದರ ಮೂಲಕ, ಸರಕಾರದ ವತಿಯಿಂದ ನಾರಾಯಣ ಗುರು ಜನ್ಮದಿನಾಚರಣೆ ಮಾಡುವುದರ ಮೂಲಕ ಗುರುಗಳಿಗೆ ಗೌರವ ಸಲ್ಲಿಸಲಾಯಿತು.

   ಮೂಡದ ಮಾಜಿ ಅಧ್ಯಕ್ಷರಾಗಿರುವ ರವಿಶಂಕರ್ ಮಿಜಾರು ಅವರು ಗುರುಗಳ  ಸಂದೇಶವನ್ನು ನೀಡಿ, ಬ್ರಹ್ಮಶ್ರೀ ನಾರಾಯಣ ಗುರುಗಳು "ಒಂದೇ ಜಾತಿ ಒಂದೇ ಮತ ಒಂದೇ ದೇವರು ಎಂಬ ಸಂದೇಶವನ್ನು ಜಗತ್ತಿಗೆ ಸಾರಿದ ಮಹಾನ್ ಸಂತ, ನಾರಾಯಣ ಗುರುಗಳು ಅಸ್ಪೃಶ್ಯತಾ ನಿವಾರಣೆ ಹಾಗೂ ಸಮಾಜದ ಒಳಿತಿಗಾಗಿ ಶ್ರಮಿಸಿದ ಮಹಾನ್ ಗುರುಗಳು ಅವರ ತತ್ವ ಆದರ್ಶ ಗಳನ್ನು ನಾವು ನಿತ್ಯ ಜೀವನದಲ್ಲಿ ಅಳವಡಿಕೊಳ್ಳಬೇಕು ಎಂಬ ಉತ್ತಮ ಸಂದೇಶವನ್ನು ನೀಡಿದರು. ಮುಖ್ಯ ಅತಿಥಿಗಳಾಗಿ ಮಂಗಳೂರು ದಕ್ಷಿಣ ಮಂಡಲದ ಅಧ್ಯಕ್ಷರಾದ ರಮೇಶ್ ಕಂಡೆಟ್ಟು, ಮೀನುಗಾರಿಕಾ ನಿಗಮದ ಮಾಜಿ ಅಧ್ಯಕ್ಷರಾದ ನಿತಿನ್ ಕುಮಾರ್, ಯುವ ಮೋರ್ಚಾದ ಅಧ್ಯಕ್ಷರಾದ ನಂದನ್ ಮಲ್ಯರವರು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ ಜಿಲ್ಲಾ ಕಾರ್ಯದರ್ಶಿ ಪೂರ್ಣಿಮಾ ಪ್ರಮುಖರಾದ ರಾಜಗೋಪಾಲ್ ರೈ, ನಾರಾಯಣ ಗಟ್ಟಿ, ಭಾಸ್ಕರ್‌ಚಂದ್ರ ಶೆಟ್ಟಿ, ರಾಮ ಅಮೀನ್ ಪಚ್ಚನಾಡಿ, ಮೋಹನರಾಜ್ ಕೆ.ಆರ್, ರಾಜೇಶ್ ಮಡಿವಾಳ, ಕಿರಣ್ ಕುಮಾರ್ ಕೋಡಿಕಲ್, ಮನೋಹರ್ ಶೆಟ್ಟಿ , ಓಬಿಸಿ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮೋನಪ್ಪ ದೇವಸ್ಯ, ಶಶಿದರ ಕಲ್ಮಂಜ, ಮೋರ್ಚಾದ ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು.  

  ಕೋಶಾಧಿಕಾರಿ ಸತೀಶ್ ಮರವೂರು ಕಾರ್ಯಕ್ರಮ ನಿರೂಪಿಸಿ, ದೀಪಿಕಾ ಮನೋಜ್ ಪ್ರಾರ್ಥನೆ ಸಲ್ಲಿಸಿ, ಅರುಣ್ ಶೇಟ್ ವಂದೇ ಮಾತರಂ ಹಾಡಿದರು, ಉಪಾಧ್ಯಕ್ಷರಾದ ವಸಂತ ಹೊಸಬೆಟ್ಟು ಧನ್ಯವಾದ ಸಲ್ಲಿಸಿದರು.

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!