BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ದಕ್ಷಿಣ ಕನ್ನಡ

Mangaluru ಮಂಗಳೂರಿನಲ್ಲಿ ವಾಹನ ಚಾಲಕರ ಸಂಘದ ವಾರ್ಷಿಕ ಮಹಾಸಭೆ ಹಾಗೂ ನಿವೃತ್ತರಿಗೆ ಸನ್ಮಾನ

 


ಮಂಗಳೂರು,ಆಗಸ್ಟ್ 11: ಕರ್ನಾಟಕ ರಾಜ್ಯ ಸರ್ಕಾರದ ವಾಹನ ಚಾಲಕರ ಕೇಂದ್ರ ಸಂಘ (ರಿ), ಬೆಂಗಳೂರು, ಜಿಲ್ಲಾ ಶಾಖೆ ಮಂಗಳೂರು ವತಿಯಿಂದ ಆಯೋಜಿಸಿದ್ದ ವಾರ್ಷಿಕ ಮಹಾಸಭೆ ಹಾಗೂ ನಿವೃತ್ತ ವಾಹನ ಚಾಲಕರ ಸನ್ಮಾನ ಸಮಾರಂಭವು ಮಂಗಳೂರಿನ ನಂದಿನಿ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಸರ್ಕಾರದ ವಾಹನ ಚಾಲಕರ ಕೇಂದ್ರ ಸಂಘ (ರಿ), ಬೆಂಗಳೂರು, ಜಿಲ್ಲಾ ಶಾಖೆ ಮಂಗಳೂರಿನ ಅಧ್ಯಕ್ಷರಾದ  ಪದ್ಮನಾಭ ಜೋಗಿ ವಹಿಸಿದ್ದರು. ಸಂಘದ ರಾಜ್ಯಾಧ್ಯಕ್ಷರಾದ  ಶ್ರೀನಿವಾಸ್ ,

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಹೆಚ್.ಆರ್. ತಿಮ್ಮಯ್ಯ, ಭಾರತೀಯ ವೈದ್ಯಕೀಯ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾದ ಡಾ. ಸದಾನಂದ ಪೂಜಾರಿ ಉಪಸ್ಥಿತರಿದ್ದರು.

ಅತಿಥಿಗಳಾಗಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾದ ಶ್ರೀ ನವೀನ ಕುಮಾರ್ ಎಂ.ಎಸ್., ದಿ ಸೌತ್ ಕೆನರಾ ಗವರ್ನಮೆಂಟ್ ಆಫೀಸರ್ಸ್ ಕೋ-ಆಪರೇಟಿವ್ ಬ್ಯಾಂಕ್, ಮಂಗಳೂರಿನ ಅಧ್ಯಕ್ಷರಾದ  ಅಂಬರೀಷ್ ಯು.ಹೆಚ್., ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖಾ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾದ  ಯೋಗೀಶ್ ದೇವಾಡಿಗ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಶಾಖೆಯ ಮಾಜಿ ಉಪಾಧ್ಯಕ್ಷರಾದ  ಹರೀಶ್ ಕುಮಾರ್ ಭಾಗವಹಿಸಿದ್ದರು.

ಸಮಾರಂಭದಲ್ಲಿ ನಿವೃತ್ತ ವಾಹನ ಚಾಲಕರ ಸೇವೆಯನ್ನು ಸ್ಮರಿಸಿ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು. ಸಂಘದ ಪದಾಧಿಕಾರಿಗಳು, ಸರ್ವಸದಸ್ಯರು ಹಾಗೂ ಗಣ್ಯರು ಉಪಸ್ಥಿತರಿದ್ದರು.

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!