BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ಉಡುಪಿ

MLA Ashok Rai on Tulu language ಮಂಗಳೂರಿನಲ್ಲಿ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ತುಳು ಭಾಷೆಯನ್ನು 2ನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಘೋಷಿಸಿ- ಶಾಸಕ ಅಶೋಕ್ ರೈ ಆಗ್ರಹ


ಮಂಗಳೂರು, ಆಗಸ್ಟ್ 29: ಮಂಗಳೂರಿನಲ್ಲಿ ಮುಂದಿನ ತಿಂಗಳು ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತುಳು ಭಾಷೆಯನ್ನು ರಾಜ್ಯದ ಎರಡನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಬೇಕೆಂದು ಪುತ್ತೂರು ಶಾಸಕ  ಅಶೋಕ್ ರೈ  ಆಗ್ರಹಿಸಿದ್ದಾರೆ. 

ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಭೇಟಿಯಾಗಿ ಮಾತುಕತೆ ನಡೆಸಿ ಮನವಿ ಮಾಡಿದ್ದಾರೆ. ತುಳು ಭಾಷೆಯನ್ನು ರಾಜ್ಯದ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸುವುದಾಗಿ ಹಿಂದಿನ ಮುಖ್ಯಮಂತ್ರಿಗಳು ಮಂಗಳೂರಿಗೆ ಆಗಮಿಸಿದ್ದ ಸಂದರ್ಭದಲ್ಲಿ ಬಹಿರಂಗ ಸಮಾವೇಶದಲ್ಲಿ ಆಶ್ವಾಸನೆ ನೀಡಿದ್ದರು. ಈ ಕುರಿತು ಹಿಂದಿನ ಅಧಿವೇಶನದಲ್ಲೂ ಚರ್ಚಿಸಲಾಗಿದೆ.

 ಆಂಧ್ರಪ್ರದೇಶದಲ್ಲಿ ಸ್ಥಳೀಯ ಭಾಷೆಗಳನ್ನು ಹೆಚ್ಚುವರಿ ಅಧಿಕೃತ ಭಾಷೆಯಾಗಿ ಅಂಗೀಕರಿಸಿರುವ ಮಾನದಂಡಗಳ ಬಗ್ಗೆ ಅಧ್ಯಯನ ನಡೆಸಲು ರಾಜ್ಯ ಸರ್ಕಾರ ಸಮಿತಿ ರಚಿಸಿತ್ತು. ಈ ಕುರಿತ ವರದಿಯನ್ನು ಈಗಾಗಲೇ ಸರಕಾರಕ್ಕೆ ಸಲ್ಲಿಸಲಾಗಿದ್ದು, ಸದನದಲ್ಲೂ ಈ ಬಗ್ಗೆ ಭರವಸೆ ನೀಡಲಾಗಿತ್ತು.

ತುಳು ಭಾಷೆಯು ಸಮೃದ್ಧ ಲಿಪಿಯನ್ನು ಹೊಂದಿದ್ದು, ಪಂಚ ದ್ರಾವೀಡ ಭಾಷೆಗಳಲ್ಲಿ ಒಂದಾದ ಪ್ರಾಚೀನ ಭಾಷೆಯಾಗಿದೆ. ತುಳು ಭಾಷೆಯನ್ನು ರಾಜ್ಯದ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸುವುದರಿಂದ ರಾಜ್ಯ ಸರ್ಕಾರಕ್ಕೆ ಯಾವುದೇ ಆರ್ಥಿಕ ಹೊರೆಯಾಗುವುದಿಲ್ಲ.

ಆಂಧ್ರಪ್ರದೇಶ, ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ಇತರೆ ಭಾಷೆಗಳನ್ನು ಹೆಚ್ಚುವರಿ ಅಧಿಕೃತ ಭಾಷೆಯಾಗಿ ಘೋಷಿಸಿರುವಂತೆ, ಕರ್ನಾಟಕದಲ್ಲೂ ತುಳು ಭಾಷೆಯನ್ನು ಮಂಗಳೂರಿನಲ್ಲಿ ನಡೆಯುವ ಸಚಿವ ಸಂಪುಟ ಸಭೆಯಲ್ಲೇ ಅಧಿಕೃತವಾಗಿ ಘೋಷಿಸಬೇಕೆಂದು ಶಾಸಕರು ಮನವಿಯಲ್ಲಿ ಒತ್ತಾಯಿಸಿದ್ದಾರೆ.

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!