BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ದಕ್ಷಿಣ ಕನ್ನಡ

Mnagluru pocso case | ಪೋಕ್ಸೊ ಪ್ರಕರಣ: ಕಡಬದ ವ್ಯಕ್ತಿಗೆ 5 ವರ್ಷ ಜೈಲು ಶಿಕ್ಷೆ ಹಾಗೂ 35 ಸಾವಿರ ರೂ. ದಂಡ ವಿಧಿಸಿ ನ್ಯಾಯಾಲಯ ತೀರ್ಪು


ಮಂಗಳೂರು, ಆಗಸ್ಟ್ 21: ಅಪ್ರಾಪ್ತ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯದ (POCSO) ಗಂಭೀರ ಪ್ರಕರಣವೊಂದರ ವಿಚಾರಣೆ ನಡೆಸಿದ ಮಂಗಳೂರಿನ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು, ಆರೋಪಿಗೆ 5 ವರ್ಷಗಳ ಸಾಧಾರಣ ಜೈಲು ಶಿಕ್ಷೆ ಹಾಗೂ 35,000 ರೂ. ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ.

ಕಡಬ ತಾಲೂಕಿನ ಕುದ್ಮಾರು ನಿವಾಸಿ ಅಬ್ದುಲ್ಲಾ (64) ಶಿಕ್ಷೆಗೆ ಒಳಗಾದ ಅಪರಾಧಿಯಾಗಿದ್ದಾರೆ. ದಂಡದ ಮೊತ್ತವನ್ನು ಪಾವತಿಸಲು ತಪ್ಪಿದರೆ ಹೆಚ್ಚುವರಿಯಾಗಿ 6 ತಿಂಗಳ ಸಾಧಾರಣ ಕಾರಾಗೃಹ ಶಿಕ್ಷೆಯನ್ನು ಅನುಭವಿಸಬೇಕು ಎಂದು ನ್ಯಾಯಾಧೀಶರಾದ ಸುಮಂಗಲ ಚಕಲಬ್ಬಿ ಅವರು ತಮ್ಮ ಆದೇಶದಲ್ಲಿ ಸ್ಪಷ್ಟಪಡಿಸಿದ್ದಾರೆ.

ಪ್ರಕರಣದ ಹಿನ್ನೆಲೆ: 2022ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುದ್ಮಾರು ಗ್ರಾಮದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಆಕೆಯನ್ನು ಗರ್ಭಿಣಿಯಾಗಿಸಿದ ಆರೋಪದ ಮೇರೆಗೆ ಅಬ್ದುಲ್ಲಾ ಎಂಬಾತನನ್ನು ಕಡಬ ಪೊಲೀಸರು ಬಂಧಿಸಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದರು.

ಗ್ರಾಮಕ್ಕೆ ಭೇಟಿ ನೀಡಿದ್ದ ಆಶಾ ಕಾರ್ಯಕರ್ತೆಯು ಬಾಲಕಿಯ ಆರೋಗ್ಯದಲ್ಲಿ ವ್ಯತ್ಯಾಸವಿರುವುದನ್ನು ಗಮನಿಸಿ ಪರಿಶೀಲಿಸಿದಾಗ, ಈ ಅಮಾನವೀಯ ಕೃತ್ಯ ಹಾಗೂ ದೌರ್ಜನ್ಯದ ವಿಚಾರ ಬೆಳಕಿಗೆ ಬಂದಿತ್ತು.

ತನಿಖೆ ಮತ್ತು ವಾದ: ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆ (IPC) ಕಲಂ 354(ಎ1), 506 ಹಾಗೂ ಪೋಕ್ಸೊ ಕಾಯ್ದೆ–2012ರ ಕಲಂ 8ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಅಂದಿನ ಸುಳ್ಯ ವೃತ್ತ ನಿರೀಕ್ಷಕರಾಗಿದ್ದ ನವೀನ್ ಚಂದ್ರ ಜೋಗಿ ಅವರು ಪ್ರಕರಣದ ಸಮಗ್ರ ತನಿಖೆ ನಡೆಸಿ, ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ (Chargesheet) ಸಲ್ಲಿಸಿದ್ದರು.

ನ್ಯಾಯಾಲಯದಲ್ಲಿ ನಡೆದ ವಿಚಾರಣೆಯ ವೇಳೆ ಆರೋಪಿಯ ಮೇಲಿನ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರು ಈ ಶಿಕ್ಷೆ ಪ್ರಕಟಿಸಿದ್ದಾರೆ. ಸರ್ಕಾರದ ಪರವಾಗಿ ಹಿರಿಯ ಸರ್ಕಾರಿ ಅಭಿಯೋಜಕ ಪುಷ್ಪರಾಜ್ ಅವರು ವಾದ ಮಂಡಿಸಿದ್ದರು.

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!