BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ದಕ್ಷಿಣ ಕನ್ನಡ

Moodbidri ಮೂಡಬಿದಿರೆ ಮಿಜಾರ್ ಬಳಿ ಬಾಡಿಗೆ ಮನೆಯಲ್ಲಿ ಸಿಲಿಂಡರ್ ಸ್ಫೋಟ, ಮೂವರಿಗೆ ಗಂಭೀರ ಗಾಯ..!


ಮೂಡಬಿದರೆ, ಆಗಸ್ಟ್ 11 : ಮಂಗಳೂರು ಹೊರವಲಯದ ಮೂಡಬಿದಿರೆ ಮಿಜಾರ್ ಬಳಿ ಬಾಡಿಗೆ ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡಿದ್ದು  ಮೂವರಿಗೆ ಗಂಭೀರ ಗಾಯಗಳಾಗಿದೆ. ಮಂಗಳವಾರ ಬೆಳಗ್ಗೆ ಸುಮಾರು 6:30ರ ವೇಳೆಗೆ ಘಟನೆ ಸಂಭವಿಸಿದೆ. ಸಿಲಿಂಡರ್ ಸ್ಫೋಟದ ಪರಿಣಾಮ ಮನೆಯಲ್ಲಿದ್ದ ಆಳ್ವಾಸ್ ಕಾಲೇಜಿನ ವಾಚ್‌ಮನ್ ಶಿವರಾಮ್ (31), ಅವರ ಪತ್ನಿ ಗಂಗಾ (25) ಹಾಗೂ ಪುತ್ರ ಆದರ್ಶ್ (6) ಗಾಯಗೊಂಡಿದ್ದಾರೆ. 

ಶಿವರಾಮ್ ಅವರಿಗೆ ತೀವ್ರ ಸ್ವರೂಪದ ಸುಟ್ಟ ಗಾಯಗಳಾಗಿದ್ದು, ಪತ್ನಿ ಗಂಗಾ ಹಾಗೂ ಪುತ್ರ ಆದರ್ಶ್‌ಗೂ ಸುಟ್ಟ ಗಾಯಗಳಾಗಿವೆ. ಘಟನೆ ನಡೆದ ತಕ್ಷಣ ಸ್ಥಳೀಯರು ಅವರನ್ನು ಮೂಡುಬಿದಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಘಟನೆಗೆ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ‌ ನಡೆಸಿದ್ದು,ಮುಂದಿನ ಕಾನೂನು ಕ್ರಮಕೈಗೊಂಡಿದ್ದಾರೆ.

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!