BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ದಕ್ಷಿಣ ಕನ್ನಡ

Muda ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ (MUDA) ನೂತನ ಅಧ್ಯಕ್ಷರಾಗಿ ಸಂತೋಷ್ ಕುಮಾರ್ ಶೆಟ್ಟಿ ನೇಮಕ


ಮಂಗಳೂರು, ಆಗಸ್ಟ್ 30 : ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ (MUDA) ನೂತನ ಅಧ್ಯಕ್ಷರನ್ನು ನೇಮಿಸಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ಇದುವರೆಗೆ ಮುಡಾ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದ ಸದಾಶಿವ ಉಲ್ಲಾಳ್ ಅವರ ಬದಲಿಗೆ, ಸಂತೋಷ್ ಕುಮಾರ್ ಶೆಟ್ಟಿ ಅವರನ್ನು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ನಾಮನಿರ್ದೇಶನ ಮಾಡಲಾಗಿದೆ.

ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳ ಕಾಯ್ದೆ 1987ರ ಕಲಂ 3ರ ಉಪ ಕಲಂ 3(ಎ)ರನ್ವಯ ಹಾಗೂ 3(4)ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಈ ಆದೇಶ ಹೊರಡಿಸಲಾಗಿದ್ದು, ನೂತನ ಅಧ್ಯಕ್ಷರು ತಕ್ಷಣದಿಂದಲೇ ಜಾರಿಗೆ ಬರುವಂತೆ ಹಾಗೂ ಸರ್ಕಾರದ ಮುಂದಿನ ಆದೇಶದವರೆಗೆ ಅಧಿಕಾರದಲ್ಲಿ ಮುಂದುವರಿಯಲಿದ್ದಾರೆ.

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!