BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ದೇಶ

Mumbai Biker Riddhi Thakkar nomore ಪ್ರವಾಸದಲ್ಲಿದ್ದ ಮುಂಬೈ ಬೈಕರ್ ರಿಧಿ ಠಕ್ಕರ್ ಛತ್ತೀಸ್ ಘಡದಲ್ಲಿ ದುರ್ಮರಣ..!


ಮುಂಬೈ, ಆಗಸ್ಟ್ 13 : ಮುಂಬೈನಿಂದ ಬೈಕ್ ಪ್ರವಾಸ ಹೊರಟಿದ್ದ ಯುವತಿಯೊಬ್ಬರು ಛತ್ತೀಸ್‌ಗಢದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಮುಂಬೈನ ಕಾಂದಿವಲಿ ವೆಸ್ಟ್ ನಿವಾಸಿ, 24 ವರ್ಷದ ರಿಧಿ ಠಕ್ಕರ್ ಮೃತ ದುರ್ದೈವಿ. ಒಟ್ಟು 23 ಮಹಿಳೆಯರ ಬೈಕ್ ಸವಾರರ ಗುಂಪಿನೊಂದಿಗೆ ಮುಂಬೈನಿಂದ ಬಸ್ತಾರ್‌ ಕಡೆಗೆ ಇವರು ಪ್ರವಾಸ ಹೊರಟಿದ್ದರು.

ಛತ್ತೀಸ್‌ಗಢದ ಧಮ್ತರಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 30ರ ಮಾರ್ಕಾ ಟೋಲಾ ಗ್ರಾಮದ ಬಳಿ ಈ ದುರ್ಘಟನೆ ಸಂಭವಿಸಿದೆ. ರಿಧಿ ಠಕ್ಕರ್ ಚಲಾಯಿಸುತ್ತಿದ್ದ ಬೈಕ್‌ಗೆ ಎದುರಿನಿಂದ ಬಂದ ವೇಗದ ಟ್ರೇಲರ್ ಲಾರಿ ಮುಖಾಮುಖಿ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಯುವತಿಗೆ ಗಂಭೀರ ಗಾಯಗಳಾಗಿವೆ.

ಅಪಘಾತದ ಬೆನ್ನಲ್ಲೇ ತುರ್ತು ಸೇವೆ 112ಕ್ಕೆ ಕರೆ ಮಾಡಲಾಗಿದ್ದು, ಕೂಡಲೇ ರಿಧಿ ಅವರನ್ನು ಚರಮಾದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಯಿತು. ಆದರೆ ಆರೋಗ್ಯ ಸ್ಥಿತಿ ಅತ್ಯಂತ ಗಂಭೀರವಾದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಧಮ್ತರಿಯ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೆ ಆಸ್ಪತ್ರೆಗೆ ತಲುಪುವಷ್ಟರಲ್ಲಿ ಅವರು ಮೃತಪಟ್ಟಿರುವುದಾಗಿ ವೈದ್ಯರು ಖಚಿತಪಡಿಸಿದ್ದಾರೆ.

ಸದ್ಯ ಮೃತ ಯುವತಿಯ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಧಮ್ತರಿ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದ್ದು, ಕಾನೂನು ಪ್ರಕ್ರಿಯೆಗಳ ಬಳಿಕ ಕುಟುಂಬಸ್ಥರಿಗೆ ಮೃತದೇಹವನ್ನು ಹಸ್ತಾಂತರಿಸಲಾಗುತ್ತದೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಜೊತೆಗಿದ್ದ ಇತರ ಮಹಿಳಾ ಬೈಕರ್‌ಗಳನ್ನು ವಿಚಾರಣೆ ನಡೆಸುತ್ತಿದ್ದಾರೆ. ಅಪಘಾತದ ಸುದ್ದಿ ತಿಳಿದ ಕೂಡಲೇ ಧಮ್ತರಿ ಮಹಾನಗರ ಪಾಲಿಕೆ ಮೇಯರ್ ಸ್ಥಳಕ್ಕೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದು, ಎಲ್ಲಾ ರೀತಿಯ ನೆರವಿನ ಭರವಸೆ ನೀಡಿದ್ದಾರೆ.

https://youtu.be/wDzv--6crLI

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!