ನೆಲಮಂಗಲ, ಆಗಸ್ಟ್ 06 : ಗ್ರಾಹಕರ ಸೋಗಿನಲ್ಲಿ ಬಂದು ದರೋಡೆಗೆ ಯತ್ನಿಸಿ ಚಿನ್ನದಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲದಲ್ಲಿ ನಡೆದಿದೆ. ನೆಲಮಂಗಲದ ಡಾಬಸ್‌ಪೇಟೆಯಲ್ಲಿರುವ ಪ್ರೇಮ್ ಶಿವ ಜ್ಯುವೆಲರಿ ಅಂಗಡಿಯಲ್ಲಿ ಈ ಘಟನೆ ನಡೆದಿದೆ. ಮಾಹಿತಿಯ ಪ್ರಕಾರ, ಬುಲೆರೋ ಕಾರಿನಲ್ಲಿ ಬಂದಿದ್ದ ಐದಾರು ಮಂದಿ ದುಷ್ಕರ್ಮಿಗಳು ಮೊದಲು ಗ್ರಾಹಕರ ಸೋಗಿನಲ್ಲಿ ಅಂಗಡಿಗೆ ಎಂಟ್ರಿಕೊಟ್ಟಿದ್ದಾರೆ. ಚಿನ್ನಾಭರಣಗಳನ್ನ ತೋರಿಸುವಂತೆ ಮಾತುಕತೆ ನಡೆಸಿದ ಬಳಿಕ, ಅಂಗಡಿಯೊಳಗೆ ಇದ್ದ ಇಬ್ಬರು ಅಪರಿಚಿತರು ಏಕಾಏಕಿ ಗನ್‌ಗಳನ್ನ ಹೊರತೆಗೆದು ದಾಳಿ ನಡೆಸಿದ್ದಾರೆ. ದರೋಡೆ ಯತ್ನವನ್ನು ಅಂಗಡಿ ಮಾಲೀಕ ಕುನ್ನಾರಾಮ್ ಪ್ರತಿರೋಧಿಸಿದ ವೇಳೆ ಆರೋಪಿಗಳು ಗುಂಡು ಹಾರಿಸಿದ್ದಾರೆ. ಗುಂಡೇಟಿನಿಂದ ಗಾಯಗೊಂಡ ಅವರನ್ನ ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಘಟನಾ ಸ್ಥಳಕ್ಕೆ ಡಾಬಸ್‌ಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲಿ ಎರಡು ಜೀವಂತ ಗುಂಡುಗಳು ಪತ್ತೆಯಾಗಿದ್ದು, ಅವುಗಳನ್ನು ವಶಕ್ಕೆ ಪಡೆದು ತನಿಖೆ ಆರಂಭಿಸಿದ್ದಾರೆ. ಆರೋಪಿಗಳ ಪತ್ತೆಗೆ ವಿಶೇಷ ಕಾರ್ಯಾಚರಣೆ ಕೈಗೊಳ್ಳಲಾಗಿದೆ.
Nelamangala Shootout ನೆಲಮಂಗಲ ಜ್ಯುವೆಲರಿ ಅಂಗಡಿಯಲ್ಲಿ ಗುಂಡಿನ ದಾಳಿ, ಗ್ರಾಹಕರ ಸೋಗಿನಲ್ಲಿ ಬಂದು ದರೋಡೆಗೆ ಯತ್ನ..!
ಸುದ್ದಿವಾಣಿ
8/06/2026 06:51:00 PM

ಟ್ಯಾಗ್ಗಳು:
ದೇಶ