ಹೈದರಾಬಾದ್, ಆಗಸ್ಟ್ 21 : ತೆಲಂಗಾಣದ ಹೈದರಾಬಾದ್‌ನಲ್ಲಿರುವ ಕೂಕಟ್‌ಪಳ್ಳಿಯ ಅಲ್ಲೂರಿ ಟ್ರೇಡ್ ಕಾಂಪ್ಲೆಕ್ಸ್‌ನಲ್ಲಿರುವ ಎರಡು OYO ಹೋಟೆಲ್‌ಗಳ ಮೇಲೆ ಹೈದರಾಬಾದ್ ಪೊಲೀಸರು ದಾಳಿ ನಡೆಸಿದ್ದಾರೆ. ಈ ಹೊಟೇಲುಗಳಲ್ಲಿ ವೇಶ್ಯವಾಟಿಕೆಯಂತಹ ಅಕ್ರಮ ಚಟುವಟಿಕೆಗಳು ( Prostitution) ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಬಂದ ಮೇರೆಗೆ ಈ ದಾಳಿ ನಡೆಸಲಾಗಿದೆ.
ಈ ದಾಳಿಯಲ್ಲಿ ಒಟ್ಟು 11 ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದು,ಅದರಲ್ಲಿ ಕೆಲವರನ್ನು ರಕ್ಷಣಾ ಕೇಂದ್ರಕ್ಕೆ ಕಳುಹಿಸಲಾಗಿದೆ. ಸ್ಥಳದಿಂದ 7 ಸ್ಮಾರ್ಟ್‌ಫೋನ್‌ಗಳು ಹಾಗೂ ಕೊಂಡೋಮ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಹೋಟೆಲ್‌ನ ಮಾಲೀಕರು ತಲೆಮರೆಸಿಕೊಂಡಿದ್ದು, ಪೊಲೀಸರು ಆತನಿಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ಸಾರ್ವಜನಿಕರು ಇಂತಹ ಅಕ್ರಮ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡುವಂತೆ ಪೊಲೀಸರು ಮನವಿ ಮಾಡಿದ್ದಾರೆ.