BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ದಕ್ಷಿಣ ಕನ್ನಡ

Puttur clash upades ಪುತ್ತೂರು: ಸಾರ್ವಜನಿಕ ಭದ್ರತೆಗೆ ಪೊಲೀಸ್ ಪಥಸಂಚಲನ; ವದಂತಿಗಳಿಗೆ ಕಿವಿಗೊಡಬೇಡಿ ಎಂದು ಪೊಲೀಸ್ ಇಲಾಖೆ ಮನವಿ


ಪುತ್ತೂರು, ಆಗಸ್ಟ್ 24: ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ಹಾಗೂ ಭದ್ರತಾ ಭಾವನೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಪುತ್ತೂರು ನಗರ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ  ಪೊಲೀಸರಿಂದ ಪಥಸಂಚಲನ ನಡೆಸಲಾಯಿತು.

ಈದ್ ಮಿಲಾದ್ ಹಬ್ಬ ಮತ್ತು ಕೆಲದಿನಗಳ ಹಿಂದೆ ನಡೆದ ಗಲಾಟೆ ಪ್ರಯುಕ್ತ ಸಾರ್ವಜನಿಕರಲ್ಲಿ ಭದ್ರತಾ ಭಾವನೆ ಮೂಡಿಸಲು ಪುತ್ತೂರು ನಗರ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ಪಥಸಂಚಲನ ನಡೆಸಿದ್ದಾರೆ.

ಈದ್ ಮಿಲಾದ್ ಬಂದ್ ವದಂತಿಗೆ ಸ್ಪಷ್ಟನೆ:  ಸ್ವಾಭಾವಿಕವಾಗಿ ಈದ್ ಮಿಲಾದ್ ಹಬ್ಬದ ದಿನದಂದು ಬಹುತೇಕ ಅಂಗಡಿಗಳು ಮುಚ್ಚಿರುತ್ತವೆ. ಇದರ ಹೊರತಾಗಿ ಯಾವುದೇ ಅಂಗಡಿ ಮುಂಗಟ್ಟುಗಳನ್ನು ಬಲವಂತವಾಗಿ ಬಂದ್ ಮಾಡುವುದಕ್ಕೆ ಆಸ್ಪದ ನೀಡದಂತೆ ಅಗತ್ಯ ಪೊಲೀಸ್ ಭದ್ರತೆಯನ್ನು ಏರ್ಪಡಿಸಲಾಗಿದೆ.



ಪುತ್ತೂರು ಗಲಾಟೆ ಪ್ರಕರಣ: ಪುತ್ತೂರಿನಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡು, ಸಂಬಂಧಪಟ್ಟವರಿಗೆ ನೋಟಿಸ್ ಜಾರಿ ಮಾಡಿದ್ದಾರೆ.

ವದಂತಿಗಳಿಗೆ ಕಿವಿಗೊಡಬೇಡಿ: ಪೊಲೀಸರು ಈ ಪ್ರಕರಣವನ್ನು ಲಘುವಾಗಿ ಪರಿಗಣಿಸುತ್ತಿದ್ದಾರೆ ಎಂದು ವದಂತಿಗಳನ್ನು ಹರಡಲಾಗುತ್ತಿದ್ದು, ಇದು ಸತ್ಯಕ್ಕೆ ದೂರವಾಗಿದೆ. ಈ ಹಿಂದಿನ ಹಲವು ಪ್ರಕರಣಗಳಲ್ಲಿ ಜಾತಿ, ಧರ್ಮ, ರಾಜಕೀಯ ಪ್ರಭಾವಗಳನ್ನು ಪರಿಗಣಿಸದೇ ಪೊಲೀಸರು ನೋಟಿಸ್ ನೀಡಿದ್ದಾರೆ. ಈ ಬಗ್ಗೆ ಯಾರಾದರೂ ಚರ್ಚಿಸಲು ಬಯಸಿದಲ್ಲಿ ಬಂದು ಮುಕ್ತವಾಗಿ ಚರ್ಚಿಸಬಹುದಾಗಿದೆ ಎಂದು ಇಲಾಖೆ ಸ್ಪಷ್ಟಪಡಿಸಿದೆ.

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!