BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ದಕ್ಷಿಣ ಕನ್ನಡ

Puttur crime ಪುತ್ತೂರು: ಅಂತರ್ ರಾಜ್ಯ ಕಳ್ಳತನ ಪ್ರಕರಣ -ಕಾರು ಕಳವು ಮಾಡಿ ಆಂಬುಲೆನ್ಸ್ ಆಗಿ ಪರಿವರ್ತಿಸಿದ್ದ ನಾಲ್ವರು ಆರೋಪಿಗಳ ಬಂಧನ


ಪುತ್ತೂರು, ಆಗಸ್ಟ್ 27: ಅಂತರ್ ರಾಜ್ಯ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯಾಚರಣೆ ನಡೆಸಿದ ಪುತ್ತೂರು ಗ್ರಾಮಾಂತರ ಪೊಲೀಸರು, ನಾಲ್ವರು ಕುಖ್ಯಾತ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಾಸರಗೋಡು ನಿವಾಸಿಗಳಾದ ಅಬ್ದುಲ್ ಸಾಯಿಲ್ ಜೆ (25), ಮೊಹಮ್ಮದ್ ಆಸೀಕ್ (25), ಮೊಹಮ್ಮದ್ ಸಿರಾಜ್ (28) ಹಾಗೂ ತಮಿಳುನಾಡಿನ ಕರೂರು ನಿವಾಸಿ ಶಕ್ತಿವೇಲು ಜಿ (24) ಬಂಧಿತವ ಆರೋಪಿಗಳು.

ಕಾರು ಕಳವು ಮಾಡಿ ಆಂಬುಲೆನ್ಸ್ ಆಗಿ ಬದಲಾವಣೆ!

ಆರೋಪಿಗಳಿಂದ ಕಳ್ಳತನ ಮಾಡಲಾದ ಕಾರು ಹಾಗೂ ಕೃತ್ಯಕ್ಕೆ ಬಳಸಲಾದ ಬೈಕ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ವಿಚಾರಣೆ ವೇಳೆ ಆರೋಪಿಗಳು ಎಸಗಿದ ಕೃತ್ಯದ ಬೆಚ್ಚಿಬೀಳಿಸುವ ಮಾಹಿತಿ ಹೊರಬಂದಿದೆ.ಆರೋಪಿಗಳು ಇಲ್ಲಿ ಕಾರನ್ನು ಕಳವು ಮಾಡಿ ಕೇರಳಕ್ಕೆ ತೆಗೆದುಕೊಂಡು ಹೋಗುತ್ತಿದ್ದರು. ಅಲ್ಲಿಂದ ತಮಿಳುನಾಡಿಗೆ ಸಾಗಿಸಿ ಮಾರಾಟ ಮಾಡುತ್ತಿದ್ದರು. ತಮಿಳುನಾಡಿನಲ್ಲಿ ಆ ಕಳವು ಮಾಡಲಾದ ವಾಹನವನ್ನು ಯಾವುದೇ ಅನುಮಾನ ಬಾರದಂತೆ ಆಂಬುಲೆನ್ಸ್ ಆಗಿ ಪರಿವರ್ತಿಸಿ ಬಳಸುವುದು ಇವರ ಕೃತ್ಯದ ಶೈಲಿಯಾಗಿತ್ತು ಎಂದು ತನಿಖೆಯಿಂದ ತಿಳಿದುಬಂದಿದೆ.

ಹಲವು ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲು

ಬಂಧಿತರ ವಿರುದ್ಧ ಈ ಹಿಂದೆ ಕೂಡ ಅಪರಾಧ ಚಟುವಟಿಕೆಗಳು ನಡೆದಿರುವುದು ಬೆಳಕಿಗೆ ಬಂದಿದೆ. ಆರೋಪಿಗಳ ವಿರುದ್ಧ ಕೇರಳದ ಬದಿಯಡ್ಕ ಪೊಲೀಸ್ ಠಾಣೆ ಹಾಗೂ ವಿದ್ಯಾನಗರ ಪೊಲೀಸ್ ಠಾಣೆಗಳಲ್ಲಿ ವಿವಿಧ ಕಳ್ಳತನ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಪುತ್ತೂರು ಗ್ರಾಮಾಂತರ ಪೊಲೀಸರ ತಂಡವು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದು, ಬಳಿಕ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!