ಮಂಗಳೂರು, ಆಗಸ್ಟ್ 21 : ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ವತಿಯಿಂದ ಸಾರ್ವಜನಿಕರ ದೂರುಗಳನ್ನು ತ್ವರಿತವಾಗಿ ಸ್ವೀಕರಿಸಿ ಪರಿಶೀಲಿಸಲು ಹೊಸದಾಗಿ ಪರಿಚಯಿಸಲಾಗಿರುವ ಕ್ಯೂಆರ್ ಕೋಡ್ (QR Code) ವ್ಯವಸ್ಥೆಯ ಮೂಲಕ ಬಂದಿರುವ ದೂರಿನ ಆಧಾರದ ಮೇಲೆ ಅಧಿಕಾರಿಗಳು ದಿಢೀರ್ ಪರಿಶೀಲನಾ ಕಾರ್ಯಾಚರಣೆ ನಡೆಸಿದ್ದಾರೆ.
ಮಂಗಳೂರಿನ ಫಳ್ನೀರ್ ರಸ್ತೆಯಲ್ಲಿರುವ 'ಎಂಎಫ್‌ಸಿ' (MFC) ರೆಸ್ಟೋರೆಂಟ್‌ನಲ್ಲಿ ಆಹಾರದ ಗುಣಮಟ್ಟ ಮತ್ತು ಸ್ವಚ್ಛತೆಯ ಕೊರತೆ ಕುರಿತು ಕ್ಯೂಆರ್ ಕೋಡ್ ಮೂಲಕ ಸಾರ್ವಜನಿಕರಿಂದ ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಎಚ್ಚೆತ್ತ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಅಧಿಕಾರಿಗಳು ರೆಸ್ಟೋರೆಂಟ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪರಿಶೀಲನೆಯ ಸಂದರ್ಭದಲ್ಲಿ ರೆಸ್ಟೋರೆಂಟ್‌ನ ಆಹಾರ ತಯಾರಿಕಾ ಸ್ಥಳ, ಬಳಸಲಾಗುತ್ತಿರುವ ಆಹಾರ ಪದಾರ್ಥಗಳ ಗುಣಮಟ್ಟ, ಅಡುಗೆ ಕೋಣೆಯ ನೈರ್ಮಲ್ಯ ಹಾಗೂ ಇಲಾಖೆಯ ನಿಯಮಗಳ ಪಾಲನೆಯನ್ನು ಅಧಿಕಾರಿಗಳು ಕಟ್ಟುನಿಟ್ಟಾಗಿ ಪರಿಶೀಲಿಸಿದರು. ಜೊತೆಗೆ, ಅನುಮಾನಾಸ್ಪದ ಆಹಾರ ಪದಾರ್ಥಗಳ ಮಾದರಿಗಳನ್ನು (Samples) ಸಂಗ್ರಹಿಸಿ, ಮುಂದಿನ ಕಾನೂನು ಕ್ರಮ ಹಾಗೂ ವರದಿಗಾಗಿ ಪ್ರಯೋಗಾಲಯಕ್ಕೆ ಕಳುಹಿಸುವ ಪ್ರಕ್ರಿಯೆ ಕೈಗೊಳ್ಳಲಾಯಿತು.
ಸಾರ್ವಜನಿಕರಿಗೆ ಇಲಾಖೆಯ ಎಚ್ಚರಿಕೆ: ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಹೋಟೆಲ್, ರೆಸ್ಟೋರೆಂಟ್ ಹಾಗೂ ಇತರೆ ಆಹಾರ ಉತ್ಪಾದನಾ ಸಂಸ್ಥೆಗಳು ಕಡ್ಡಾಯವಾಗಿ ಆಹಾರ ಸುರಕ್ಷತಾ ನಿಯಮಗಳನ್ನು ಪಾಲಿಸಬೇಕು. ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ಎಚ್ಚರಿಕೆ ನೀಡಿದೆ.
ಹೋಟೆಲ್‌ಗಳಲ್ಲಿ ಆಹಾರದ ಗುಣಮಟ್ಟ, ನೈರ್ಮಲ್ಯ ಅಥವಾ ಇತರೆ ಸುರಕ್ಷತೆಗೆ ಸಂಬಂಧಿಸಿದ ಯಾವುದೇ ದೂರುಗಳಿದ್ದಲ್ಲಿ, ಸಾರ್ವಜನಿಕರು ಇಲಾಖೆಯ ಅಧಿಕೃತ ಕ್ಯೂಆರ್ ಕೋಡ್ ವ್ಯವಸ್ಥೆಯನ್ನು ಬಳಸಿ ನೇರವಾಗಿ ದೂರು ದಾಖಲಿಸುವಂತೆ ಮನವಿ ಮಾಡಲಾಗಿದೆ.