ಮಂಗಳೂರು,ಆಗಸ್ಟ್ 04: ಭಾರೀ ಮಳೆಯ ಮುನ್ಸೂಚನೆ ಇರುವ ಕಾರಣ ದ.ಕ. ಜಿಲ್ಲೆಯ ಶಾಲಾ- ಕಾಲೇಜುಗಳಿಗೆ ಇಂದು ವಿಭಾಗವಾರು ರಜೆ ಘೋಷಣೆ ಮಾಡಿ ದ.ಕ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಮಂಗಳೂರು ಉಪವಿಭಾಗ :
ಮಂಗಳೂರು, ಬಂಟ್ವಾಳ, ಮೂಡುಬಿದಿರೆ, ಮೂಲ್ಕಿ, ಉಳ್ಳಾಲ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಹಾಗೂ ಎಲ್ಲಾ ವಸತಿ ಶಾಲೆಗಳಿಗೆ ಆ.4 ಇಂದು ರಜೆ ಸಾರಲಾಗಿದೆ.
ಪುತ್ತೂರು ಉಪವಿಭಾಗ:
ಪುತ್ತೂರು, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕುಗಳ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಪಿಯು ಕಾಲೇಜುಗಳು ಹಾಗೂ ಎಲ್ಲಾ ಐಟಿಐ, ಡಿಪ್ಲೊಮಾ ಕಾಲೇಜುಗಳಿಗೆ (ಎಲ್ಲಾ ವಸತಿ ಶಾಲಾ-ಕಾಲೇಜುಗಳು ಸೇರಿದಂತೆ) ಆ.4ರ ಇಂದು ರಜೆ ಘೋಷಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಪ್ರಕಟನೆಯಲ್ಲಿ ತಿಳಿಸಿದ್ದಾರೆ.

