BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ರಾಜ್ಯ

Separate Anti-Rowdy Squad for every district in the State- CM Dk Shivakumar ರಾಜ್ಯದ ಪ್ರತಿ ಜಿಲ್ಲೆಗೊಂದು ಪ್ರತ್ಯೇಕ ರೌಡಿ ನಿಗ್ರಹ ಪಡೆ; ಸಿಎಂ ಡಿ ಕೆ ಶಿವಕುಮಾರ್ ಘೋಷಣೆ..!


ಬೆಂಗಳೂರು, ಆಗಸ್ಟ್ 28 : ರಾಜ್ಯದ ಪ್ರತಿ ಜಿಲ್ಲೆಗೊಂದು ಪ್ರತ್ಯೇಕ ರೌಡಿ ನಿಗ್ರಹ ಪಡೆ ಸ್ಥಾಪನೆ ಮಾಡುವುದಾಗಿ ಸಿಎಂ ಡಿ ಕೆ ಶಿವಕುಮಾರ್ ಘೋಷಣೆ ಮಾಡಿದ್ದಾರೆ. 

ಕರ್ನಾಟಕ ರಾಜ್ಯ ಪೊಲೀಸರಿಗಾಗಿ ಸಮಗ್ರ ಸಾಮರ್ಥ್ಯ ವೃದ್ದಿ ತರಬೇತಿಗೆ ಸಿಎಂ ಡಿ ಕೆ ಶಿವಕುಮಾರ್ ಅವರು ಬೆಂಗಳೂರಿನ ಮಾಣಿಕ್ ಶಾ ಮೈದಾನದಲ್ಲಿ ಶುಕ್ರವಾರ ಚಾಲನೆ ನೀಡಿ ಮಾತನಾಡಿದರು.

"ಪೊಲೀಸರಿಗ ಹೆಚ್ಚಿನ ವಸತಿ ವ್ಯವಸ್ಥೆ  ಹಾಗೂ ಅವರ ಮೇಲಿರುವ ಒತ್ತಡ ಕಡಿಮೆ ಮಾಡುವುದು ನಮ್ಮ ಕರ್ತವ್ಯ. ಆ ಕೆಲಸವನ್ನು ಶೀಘ್ರದಲ್ಲೇ ಮಾಡುತ್ತೇವೆ. ಬೆಂಗಳೂರು ನಗರ ಒಳಗೊಂಡಂತೆ ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲೂ ರೌಡಿಗಳನ್ನು ನಿಗ್ರಹಕ್ಕೆ ಪ್ರತ್ಯೇಕ ಐಪಿಎಸ್ ಅಧಿಕಾರಿಗಳ ನೇತೃತ್ವದಲ್ಲಿ ರೌಡಿ ನಿಗ್ರಹ ಪಡೆ ರಚಿಸುವ ಕಾರ್ಯಕ್ಕೆ ಈಗಾಗಲೇ ಚಾಲನೆ ನೀಡಿದ್ದೇವೆ. ಈ ತಂಡ ಯಾವ ರಾಜಕೀಯ ಒತ್ತಡಕ್ಕೂ ಮಣಿಯದೇ ಜನರಿಗೆ ಭದ್ರತೆ, ಸಮಾಜದಲ್ಲಿ ಸ್ವಾಸ್ಥ್ಯ ಕಾಪಾಡುವ ಕೆಲಸ ಮಾಡಲಿದೆ" ಎಂದರು.

"ಕರ್ನಾಟಕದ ಪೊಲೀಸರು ದೇಶದ ಕೀರ್ತಿಯನ್ನು ಹೆಚ್ಚಿಸುವಂತಾಗಲಿ. ಕರ್ನಾಟಕ ಬಲಗೊಂಡರೆ ದೇಶ ಬಲಗೊಂಡಂತೆ.  ವಿದೇಶದಿಂದ ಭಾರತಕ್ಕೆ ಬರುವವರು ಮೊದಲು ಕರ್ನಾಟಕಕ್ಕೆ ಕಾಲಿಡುತ್ತಾರೆ. ವಿಶ್ವ ಕರ್ನಾಟಕದ ಕಡೆ ನೋಡುತ್ತಿದೆ. ಹಾಗಾಗಿ ಪೊಲೀಸರ ಮೇಲೆ ಹೆಚ್ಚಿನ ಜವಾಬ್ದಾರಿಯಿದೆ" ಎಂದರು.

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!