BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ದೇಶ

Shahrukh khan | ಕಿಂಗ್ ಖಾನ್ ಶಾರುಖ್ ಖಾನ್ ಮನೆಯಲ್ಲಿ ಕಾಣಿಸಿಕೊಂಡ ದೈತ್ಯ ಹಾವು, ಉರಗ ತಜ್ಞರಿಂದ ರಕ್ಷಣೆ..!


ಮುಂಬೈ , ಆಗಸ್ಟ್ 18 : ಬಾಲಿವುಡ್ ಸೂಪರ್‌ಸ್ಟಾರ್ ಶಾರುಖ್ ಖಾನ್ ಅವರ ಮುಂಬೈನ ಬಾಂದ್ರಾದಲ್ಲಿರುವ ಪ್ರಸಿದ್ಧ 'ಮನ್ನತ್' ಮನೆಯಲ್ಲಿ ಬೃಹತ್ ಹಾವೊಂದು ಕಾಣಿಸಿಕೊಂಡು ಕೆಲಕಾಲ ಕೋಲಾಹಲ ಸೃಷ್ಟಿಸಿದ ಘಟನೆ ನಡೆದಿದೆ.

ಮನ್ನತ್ ಮನೆಯ ಹೊರಾಂಗಣದ ಮೆಟ್ಟಿಲುಗಳ ಪಕ್ಕದಲ್ಲಿ 8 ಅಡಿ ಉದ್ದದ ಬೃಹತ್ ಹಾವೊಂದು ಗೋಚರಿಸಿದೆ. ಹಾವನ್ನು ಕಂಡ ಕೂಡಲೇ ಎಚ್ಚೆತ್ತುಕೊಂಡ ಸಿಬ್ಬಂದಿಗಳು ಆತಂಕಗೊಂಡರಲ್ಲದೆ, ಹಾವು ನೇರವಾಗಿ ಮನೆಯೊಳಗೆ ನುಸುಳದಂತೆ ಎಚ್ಚರಿಕೆಯಿಂದ ಕಾಪಾಡಿಕೊಂಡರು. ತಕ್ಷಣವೇ ಅರಣ್ಯ ಇಲಾಖೆ ಹಾಗೂ ಉರಗ ತಜ್ಞರಿಗೆ ಮಾಹಿತಿ ನೀಡಲಾಯಿತು.

ಸ್ಥಳಕ್ಕೆ ಧಾವಿಸಿದ ಉರಗ ತಜ್ಞ ವಿಕಿ ದುಬೆ ನೇತೃತ್ವದ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿ, 8 ಅಡಿ ಉದ್ದದ ಹಾವನ್ನು ಸುರಕ್ಷಿತವಾಗಿ ಸೆರೆಹಿಡಿದರು.

ಸೆರೆಹಿಡಿಯಲಾದ ಈ ಹಾವು 'ಧಾಮನ್' (Rat Snake) ತಳಿಗೆ ಸೇರಿದ್ದು, ಇದು ವಿಷಪೂರಿತವಲ್ಲ ಎಂದು ಉರಗ ತಜ್ಞರು ಸ್ಪಷ್ಟಪಡಿಸಿದ್ದಾರೆ. ನಂತರ ಹಾವನ್ನು ಚೀಲದಲ್ಲಿಬಂಧಿಸಿ, ಅರಣ್ಯ ಇಲಾಖೆಯ ನಿಯಮಗಳ ಪ್ರಕಾರ ಸುರಕ್ಷಿತವಾಗಿ ಹತ್ತಿರದ ಅರಣ್ಯ ಪ್ರದೇಶಕ್ಕೆ ಬಿಡಲಾಗಿದೆ. ಮನೆಯಲ್ಲಿ ಹಾವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸಿಬ್ಬಂದಿ ಹಾಗೂ ನಿವಾಸಿಗಳು ಕೆಲಕಾಲ ಆತಂಕಪಡುವಂತಾಯಿತು

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!