BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ರಾಜ್ಯ

Shimogga ಶಿವಮೊಗ್ಗ ಜಿಲ್ಲೆಗೆ ಬಜರಂಗದಳ ಮುಖಂಡ ಶರಣ್ ಪಂಪ್ವೆಲ್ ಪ್ರವೇಶಕ್ಕೆ 10 ದಿನಗಳ ನಿಷೇಧ!


ಶಿವಮೊಗ್ಗ,ಆಗಸ್ಟ್ 19 : ಶಿವಮೊಗ್ಗ ಜಿಲ್ಲೆಯಲ್ಲಿ ಕೋಮು ಸೌಹಾರ್ದತೆ ಕಾಪಾಡುವ ನಿಟ್ಟಿನಲ್ಲಿ ಜಿಲ್ಲಾಡಳಿತ ಮಹತ್ವದ ಆದೇಶ ಹೊರಡಿಸಿದೆ. ಬಜರಂಗದಳದ ಪ್ರಮುಖ ಮುಖಂಡ ಶರಣ್ ಕುಮಾರ್ ಪಂಪ್ವೆಲ್ ಶಿವಮೊಗ್ಗ ಜಿಲ್ಲೆ ಪ್ರವೇಶಿಸದಂತೆ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ನಿಷೇಧ ಹೇರಿದ್ದಾರೆ.

ವಿಶ್ವ ಹಿಂದೂ ಪರಿಷತ್ (VHP) ಸಂಘಟನೆಯ ದಕ್ಷಿಣ ಪ್ರಾಂತ ಜಂಟಿ ಕಾರ್ಯದರ್ಶಿಯಾಗಿರುವ ಶರಣ್ ಕುಮಾರ್ ಪಂಪ್ವೆಲ್ ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದು, ಅವರ ಪ್ರಚೋದನಕಾರಿ ಭಾಷಣಗಳಿಂದ ಸಾರ್ವಜನಿಕ ಶಾಂತಿ ಕದಡಬಹುದು ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗಬಹುದು ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರು ಜಿಲ್ಲಾಡಳಿತಕ್ಕೆ ವರದಿ ಸಲ್ಲಿಸಿದ್ದರು. ಈ ವರದಿಯನ್ನು ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾಧಿಕಾರಿಗಳು, ಮುಂಜಾಗ್ರತಾ ಕ್ರಮವಾಗಿ ಈ ನಿರ್ಬಂಧಕಾಜ್ಞೆ ಜಾರಿಗೊಳಿಸಿದ್ದಾರೆ.

ಇಂದಿನಿಂದ ಅಂದರೆ 2026ರ ಆಗಸ್ಟ್ 19ರಿಂದ ಮುಂದಿನ 10 ದಿನಗಳ ಕಾಲ ಶರಣ್ ಕುಮಾರ್ ಪಂಪ್ವೆಲ್ ಶಿವಮೊಗ್ಗ ಜಿಲ್ಲೆಯ ಗಡಿ ಪ್ರವೇಶಿಸುವಂತಿಲ್ಲ ಎಂದು ಸ್ಪಷ್ಟ ಆದೇಶ ಹೊರಡಿಸಲಾಗಿದೆ.


📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!