BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ದಕ್ಷಿಣ ಕನ್ನಡ

Shivamogga ಶಿವಮೊಗ್ಗದಲ್ಲಿ ಗೋಕಳ್ಳರ ಅಟ್ಟಹಾಸ, ತಡೆಗೆ ಹೋದವರ ಮೇಲೆ ಮಾರಕಾಸ್ತ್ರಗಳಿಂದ ದಾಳಿ, ಬಜರಂಗದಳ ಕಾರ್ಯಕರ್ತನಿಗೆ ಗಂಭೀರ ಗಾಯ, VHP ಖಂಡನೆ


ಶಿವಮೊಗ್ಗ, ಆಗಸ್ಟ್ 16 : ರಾಜ್ಯದ 
ಮಲೆನಾಡು ಭಾಗದಲ್ಲಿ ಅಕ್ರಮ ಗೋಕಳ್ಳರ ಅಟ್ಟಹಾಸ ಮುಂದುವರಿದಿದೆ.  ರಾತ್ರೋರಾತ್ರಿ ಜಾನುವಾರುಗಳನ್ನು ರಕ್ಷಿಸಲು ತೆರಳಿದ ಗೋ ಸಂರಕ್ಷಕರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, ಹತ್ಯೆಗೆ ಯತ್ನಿಸಲಾಗಿದೆ. ಈ ಆಘಾತಕಾರಿ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹರತಾಳು ಗ್ರಾಮದಲ್ಲಿ ನಡೆದಿದೆ

ಹೊಸನಗರ ತಾಲೂಕಿನ ಹರತಾಳು ಗ್ರಾಮದಲ್ಲಿ ತಡರಾತ್ರಿ ಬಂದ ಕಳ್ಳರ ಗುಂಪು, ಬಜರಂಗದಳ ಕಾರ್ಯಕರ್ತನ ಹಸು ಕೊಟ್ಟಿಗೆಗೆ ಕನ್ನ ಹಾಕಿ ಜಾನುವಾರುಗಳನ್ನು ವಾಹನಕ್ಕೆ ತುಂಬಿಕೊಂಡು ಪರಾರಿಯಾಗಲು ಯತ್ನಿಸಿದೆ ಜಾನುವಾರುಗಳ ಸದ್ದು ಕೇಳಿ ಎಚ್ಚೆತ್ತ ಮನೆಯವರು ಹಾಗೂ ಕಾರ್ಯಕರ್ತರು ಕಳ್ಳರ ವಾಹನವನ್ನು ಕಾರಿನಲ್ಲಿ ಹಿಂಬಾಲಿಸಿದ್ದಾರೆ. ತಪ್ಪಿಸಿಕೊಳ್ಳಲು ಯತ್ನಿಸಿದ ಕಳ್ಳರು, ಕಾರ್ಯಕರ್ತರ ಕಾರಿಗೆ ತಮ್ಮ ವಾಹನದಿಂದ ಬಲವಾಗಿ ಡಿಕ್ಕಿ ಹೊಡೆದಿದ್ದಾರೆ. ಈ ರಭಸಕ್ಕೆ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ . ಕಾರಿನಿಂದ ಇಳಿದ ಕಾರ್ಯಕರ್ತರ ಮೇಲೆ ಕಿಡಿಗೇಡಿಗಳು ಮಾರಕಾಸ್ತ್ರಗಳಿಂದ ಭೀಕರ ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಬಜರಂಗದಳ ಕಾರ್ಯಕರ್ತ ಚಂದ್ರಶೇಖರ್ ತೀವ್ರ ಗಾಯಗೊಂಡಿದ್ದು, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಜೊತೆಯಲ್ಲಿದ್ದ ಕಿರಣ್ ಮತ್ತು ಅಭಿಲಾಷ್‌ಗೂ ಗಾಯಗಳಾಗಿವೆ.

ಈ ಕುರಿತು ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೂಡಲೇ ಗೋ ಕಳ್ಳರನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಗಿದೆ. 



ಘಟನೆಗೆ ವಿಶ್ವಹಿಂದೂ ಪರಿಷದ್ ಖಂಡನೆ:

ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಸಾಲೂರು ಗ್ರಾಮದ ಬಳಿ ಅಕ್ರಮವಾಗಿ ಗೋವುಗಳನ್ನು ಕಸಾಯಿಖಾನೆಗೆ ಸಾಗಿಸುತ್ತಿದ್ದ ವಾಹನವನ್ನು ತಡೆದು ಪೊಲೀಸರಿಗೆ ಮಾಹಿತಿ ನೀಡಿದ ಸಾಗರ ಘಟಕದ ಗೋ ರಕ್ಷಾ ಕಾರ್ಯಕರ್ತರ ಮೇಲೆ ಗೋ ಕಳ್ಳರು ಪಿಕಪ್ ವಾಹನದಿಂದ ಡಿಕ್ಕಿ ಹೊಡೆಸಿ, ಲಾಂಗ್ ಹಾಗೂ ಮಚ್ಚುಗಳಿಂದ ಮಾರಣಾಂತಿಕ ಹಲ್ಲೆ ನಡೆಸಿ ಕೊಲ್ಲಲು ಯತ್ನಿಸಿರುವುದನ್ನು ವಿಶ್ವ ಹಿಂದೂ ಪರಿಷದ್   ತೀವ್ರವಾಗಿ ಖಂಡಿಸಿದೆ. ಇಂದು ಈ ಅಕ್ರಮ ಗೋ ಸಾಗಾಟದ ಜಾಲವು ತಾಲೂಕಿನ ಎಲ್ಲೆಯನ್ನೂ ಮೀರಿ ಬೃಹತ್ ಪ್ರಮಾಣದಲ್ಲಿ ಬೆಳೆದಿದ್ದು, ಸಾರ್ವಜನಿಕರ ಜೀವಕ್ಕೂ ಕಂಟಕವಾಗಿ ಪರಿಣಮಿಸಿದೆ.  ಈ ಭೀಕರ ದಾಳಿ ನಡೆಸಿ ಗೂಂಡಾಗಿರಿ ಮೆರೆದಿರುವ ಅಪರಾಧಿಗಳ ಮೇಲೆ ತಕ್ಷಣವೇ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ಜೈಲಿಗಟ್ಟಬೇಕು ರಾಜ್ಯ ಸರಕಾರಕ್ಕೆ ಆಗ್ರಹಿಸುತ್ತೇವೆ. ತಪ್ಪಿತಸ್ಥರ ವಿರುದ್ಧ ತಕ್ಷಣ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ಉಗ್ರ ಹೋರಾಟವನ್ನು ಹಮ್ಮಿಕೊಳ್ಳಲಾಗುವುದು ಎಂದು ವಿಶ್ವ ಹಿಂದೂ ಪರಿಷದ್ ಪ್ರಾಂತ ಸಹ ಕಾರ್ಯದರ್ಶಿ   ಶರಣ್ ಪಂಪ್ವೆಲ್ ಎಚ್ಚರಿಕೆ ನೀಡಿದ್ದಾರೆ. 

https://youtube.com/shorts/vJ1-TDH5v0Q?feature=share

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!